ETV Bharat / city

ಕೆರೆಗೆ ಬಿದ್ದು ಪ್ರೇಮಿಗಳಿಬ್ಬರ ಆತ್ಮಹತ್ಯೆ.. ಕಾರಣ ನಿಗೂಢ - ಮೃತದೇಹಗಳು

ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಕೆರೆಯಲ್ಲಿ ಯುವಕ ಮತ್ತು ಯುವತಿಯ ಹುಡುಕಾಟ ನಡೆಸಿದ್ದು, ಶವ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಕಾರ್ಯಚರಣೆ ನಡೆಸಿದ್ದು ಇಬ್ಬರ ಮೃತದೇಹಗಳು ಪತ್ತೆಯಾಗಿವೆ.

Firefighter operation
ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆ
author img

By

Published : Aug 18, 2022, 9:32 AM IST

ದಾವಣಗೆರೆ : ಪ್ರೇಮಿಗಳಿಬ್ಬರು ಕೆರೆಯಲ್ಲಿ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಂಕಿಕೆರೆ ಗ್ರಾಮದ ಕೂಗಳತೆಯಲ್ಲಿರುವ ಕೆರೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಚರಣ್ ಮತ್ತು ನಾಗವೇಣಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ನಿನ್ನೆ ಇಬ್ಬರು ಬೈಕ್​ನಲ್ಲಿ ಬೆಂಕಿಕೆರೆ ಗ್ರಾಮದ ಕೆರೆಯ ಬಳಿ ಬಂದಿದ್ದು, ನಂತರ ಯುವಕ ಚರಣ್ ಬೆಂಗಳೂರಿನಲ್ಲಿ ಇರುವ ತಂದೆಗೆ ಮತ್ತು ಸ್ನೇಹಿತನಿಗೆ ಕರೆ ಮಾಡಿ ಇಬ್ಬರು ಕೆರೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾನೆ. ನಂತರ ಸಂಬಂಧಿಕರ ಮಾಹಿತಿ ಮೇರೆಗೆ ಪೊಲೀಸರು ಬೆಂಕಿಕೆರೆ ಗ್ರಾಮದ ಕೆರೆಯ ಬಳಿ ಪರಿಶೀಲನೆ ನಡೆಸಿದಾಗ ಸ್ಥಳದಲ್ಲಿ ಯುವಕನ ಬೈಕ್ ಮತ್ತು ಇಬ್ಬರ ಚಪ್ಪಲಿ ಪತ್ತೆಯಾಗಿದೆ.

ನಂತರ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಕೆರೆಯಲ್ಲಿ ಯುವಕ ಮತ್ತು ಯುವತಿಯ ಹುಡುಕಾಟ ನಡೆಸಿದ್ದು, ಶವ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಕಾರ್ಯಾಚರಣೆ ನಡೆಸಿದ್ದು ಇಬ್ಬರ ಮೃತದೇಹಗಳು ಪತ್ತೆಯಾಗಿದೆ. ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದು, ಮನೆಯವರ ವಿರೋಧಕ್ಕೆ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸ್ಥಳದಲ್ಲಿ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದ್ದು, ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮೂವರು ಹೆಣ್ಣು ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ: ರೈಲ್ವೆ ಹಳಿ ಮೇಲೆ ಶವ ಪತ್ತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.