ETV Bharat / city

ಹಣ ಕೇಳುವ, ಲಕೋಟೆ ಸಂಸ್ಕೃತಿ ಬಿಜೆಪಿಯಲ್ಲಿಲ್ಲ: ರೇಣುಕಾಚಾರ್ಯ - 2 ಸಾವಿರ ಬೇಡಿಕೆ ಬಗ್ಗೆ ರೇಣುಕಾಚಾರ್ಯ ಮಾತು

ಸಿಎಂ, ಸಚಿವ ಸ್ಥಾನಕ್ಕಾಗಿ 2.5 ಸಾವಿರ ಕೋಟಿ ರೂಪಾಯಿ ಬೇಡಿಕೆ ಬಂದಿದೆ ಎಂಬ ಯತ್ನಾಳ್​ ಆರೋಪವನ್ನು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ತಳ್ಳಿ ಹಾಕಿದ್ದಾರೆ.

m-p-renukacharya
ರೇಣುಕಾಚಾರ್ಯ
author img

By

Published : May 7, 2022, 6:01 PM IST

Updated : May 7, 2022, 7:48 PM IST

ದಾವಣಗೆರೆ: ಬಿಜೆಪಿಯಲ್ಲಿ ಸಿಎಂ, ಸಚಿವ ಸ್ಥಾನದ ಲಾಬಿಗೆ ಅವಕಾಶ ಇಲ್ಲ. ಹೈಕಮಾಂಡ್​ನಿಂದ ಸಿಎಂ ಸ್ಥಾನಕ್ಕಾಗಿ 2,500 ಕೋಟಿ ರೂಪಾಯಿ ಬೇಡಿಕೆ ಇದೆ ಎಂದು ಶಾಸಕ ಯತ್ನಾಳ್ ಅವರು ಹೇಳಿಕೆ ನೀಡಿದ್ದು ತಪ್ಪು. ಬಹಿರಂಗ ಸಭೆಯಲ್ಲಿ ಈ ರೀತಿಯಲ್ಲಿ ಹೇಳುವುದು ಸರಿಯಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ಮಾತನಾಡಿದ ಅವರು, ಯತ್ನಾಳ್ ನನಗಿಂತ ಹಿರಿಯರು. ಯಾವ ಅರ್ಥದಲ್ಲಿ ಈ ರೀತಿ ಹೇಳಿದ್ದಾರೋ ಗೊತ್ತಿಲ್ಲ. ಅವರು ಬಿಜೆಪಿ ಮುಖಂಡರೇ ಹಣ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಿಲ್ಲ. ಯಾರೋ ಮಧ್ಯವರ್ತಿಗಳು ಕೇಳಿದ್ದಾರೆ ಎಂದಿದ್ದಾರೆ. ಈ ರೀತಿ ಸಾರ್ವಜನಿಕ ಸಮಾರಂಭಗಳಲ್ಲಿ ಮಾತನಾಡಬಾರದು ಎಂದು ಅವರಲ್ಲಿ ಮನವಿ ಮಾಡುತ್ತೇವೆ ಎಂದರು.

ಹಣ ಕೇಳುವ, ಲಕೋಟೆ ಸಂಸ್ಕೃತಿ ಬಿಜೆಪಿಯಲ್ಲಿಲ್ಲ: ರೇಣುಕಾಚಾರ್ಯ

ಶಾಸಕಾಂಗ ಸಭೆಯಲ್ಲಿ ನಿರ್ಣಯವಾದ ನಂತರ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾರೆ. ನಮ್ಮಲ್ಲಿ ಹಣ ಕೇಳುವ ಸಂಸ್ಕೃತಿ ಇಲ್ಲ. ಅದು ಕಾಂಗ್ರೆಸ್ ಸಂಸ್ಕೃತಿ. ಲಕೋಟೆ ಸಂಸ್ಕೃತಿ ನಮ್ಮಲ್ಲಿ ಎಂದಿಗೂ ಬರುವುದಿಲ್ಲ. ಯಾರನ್ನು ಸಚಿವರನ್ನಾಗಿ ಮಾಡಬೇಕು, ಯಾರನ್ನು ಬಿಡಬೇಕು ಎಂಬುದು ಸಿಎಂ ಹಾಗೂ ಹೈಕಮಾಂಡ್​ಗೆ ಬಿಟ್ಟ ವಿಚಾರ ಎಂದರು.

ಹೆಚ್​ಡಿಕೆ ಹಿಟ್ ಅಂಡ್​ ರನ್ ಮಾತು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಬಿಜೆಪಿಯ ಪ್ರಭಾವಿಗಳಿದ್ದಾರೆ ಎಂಬ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ಆರೋಪ ಮಾಡಿರುವುದು ಹಿಟ್ ಅಂಡ್ ರನ್ ರೀತಿಯಾಗಿದೆ. ಗಾಳಿಯಲ್ಲಿ ಗುಂಡು ಹೊಡೆಯುವ ರೀತಿ ಮಾತನಾಡಿದ್ದಾರೆ. ಬುಟ್ಟಿಯಲ್ಲಿ ಹಾವಿದೆ ಎಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕುಮಾರಸ್ವಾಮಿ ದಿನವೂ ಹೇಳ್ತಾರೆ. ರಾಜೀನಾಮೆ ಕೇಳುತ್ತಾರೆ. ಅವರ ಅವಧಿಯಲ್ಲಿ ಎಷ್ಟು ಜನ ಸಚಿವರ ರಾಜೀನಾಮೆ ಪಡೆದಿದ್ದಾರೆ ಎಂಬುದನ್ನು ತಿಳಿಸಲಿ. ರಾಜೀನಾಮೆ ಕೇಳುವ ನೈತಿಕತೆ ಅವರಿಗೆ ಇಲ್ಲ ಎಂದು ರೇಣುಕಾಚಾರ್ಯ ಇದೇ ವೇಳೆ ತಿರುಗೇಟು ನೀಡಿದರು.

ಓದಿ: ಸಾಹುಕಾರರು ಪಾಪರ್ ಆಗಿದ್ದಾರೆ : ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿ ಪರೋಕ್ಷ ವಾಗ್ದಾಳಿ

Last Updated : May 7, 2022, 7:48 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.