ETV Bharat / city

ದಾವಣಗೆರೆಯಲ್ಲಿ ಸಂಕ್ರಾಂತಿಯಂದೇ ಭೀಕರ ರಸ್ತೆ ಅಪಘಾತ.. ಮದ್ಯ ಸೇವಿಸಿ ನಿದ್ರೆಗೆ ಜಾರಿದ ಚಾಲಕ, ಏಳು ಜನರ ದುರ್ಮರಣ - ದಾವಣಗೆರೆಯಲ್ಲಿ ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು

ಬೆಳ್ಳಂಬೆಳಗ್ಗೆ ರಸ್ತೆ ವಿಭಜಕಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಏಳು ಜನ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

many person killed in road accident at Davanagere  road accident in Davanagere  Car collision to divider in Davanagere  Davanagere accident news  ಭೀಕರ ರಸ್ತೆ ಅಪಘಾತದಲ್ಲಿ ಹಲವರು ಸಾವು  ದಾವಣಗೆರೆ ಭೀಕರ ರಸ್ತೆ ಅಪಘಾತದಲ್ಲಿ ಹಲವರು ಸಾವು  ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ  ದಾವಣಗೆರೆಯಲ್ಲಿ ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು  ದಾವಣಗೆರೆ ಅಪಘಾತ ಸುದ್ದಿ
ದಾವಣಗೆರೆಯಲ್ಲಿ ಸಂಕ್ರಾಂತಿಯಂದೇ ಭೀಕರ ರಸ್ತೆ ಅಪಘಾತ
author img

By

Published : Jan 14, 2022, 8:52 AM IST

Updated : Jan 14, 2022, 9:40 AM IST

ದಾವಣಗೆರೆ: ಬೆಳ್ಳಂಬೆಳಗ್ಗೆ ಇಂಡಿಕಾ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಏಳು ಜನ ಸಾವನ್ನಪ್ಪಿರುವ ಘಟನೆ ಜಗಳೂರು ತಾಲೂಕಿನ ಕಾನನಕಟ್ಟೆ ಟೋಲ್ (NH 13) ಬಳಿ ಜರುಗಿದೆ.

ದಾವಣಗೆರೆಯಲ್ಲಿ ಸಂಕ್ರಾಂತಿಯಂದೇ ಭೀಕರ ರಸ್ತೆ ಅಪಘಾತ

ರಾಷ್ಟ್ರೀಯ ಹೆದ್ದಾರಿ 13ರಲ್ಲಿ ರಭಸವಾಗಿ ಬರುತ್ತಿದ್ದ ಕಾರು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಏಳು ಜನ ಮೃತಪಟ್ಟಿದ್ದಾರೆ. ಕಾರಿನ ಚಾಲಕ ಮದ್ಯ ಸೇವಿಸಿ ನಿದ್ದೆಗೆ ಜಾರಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಎಸ್ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ.

ಕಾರು ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಆರು ಜನ ಅಸುನೀಗಿದ್ದು, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಮೃತರು ಮಲ್ಲಂಗೋವ(22), ಸಂತೋಷ್(21), ಸಂಜೀವ್(20), ಜೈಭೀಮ್(18), ರಾಘು(23), ಸಿದ್ದೇಶ್(20), ವೇದಮೂರ್ತಿ(18) ಎಂದು ಗುರುತಿಸಲಾಗಿದೆ.

ಓದಿ: ಪವಿತ್ರ ಗಂಗಾನದಿಯಲ್ಲಿ ಮಿಂದೇಳುತ್ತಿರುವ ಭಕ್ತರು: ಪೊಂಗಲ್ ಆಚರಿಸಿದ ಪುದುಚೇರಿ ಲೆಫ್ಟಿನೆಂಟ್ ಗವರ್ನರ್

ಮೃತರಲ್ಲಿ ನಾಲ್ವರು ಯಾದಗಿರಿಯ ಶಾಹಪುರ ತಾಲೂಕು ನಿವಾಸಿಗಳಾದರೆ, ಇನ್ನಿಬ್ಬರು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ನಿವಾಸಿಗಳು ಎಂದು ತಿಳಿದು ಬಂದಿದೆ. ಮತ್ತೊಬ್ಬ ವಿಜಯಪುರ ಜಿಲ್ಲೆಯ ತಾಳಿಕೋಟೆ ನಿವಾಸಿ ಎಂದು ಗುರುತಿಸಲಾಗಿದೆ.

many person killed in road accident at Davanagere  road accident in Davanagere  Car collision to divider in Davanagere  Davanagere accident news  ಭೀಕರ ರಸ್ತೆ ಅಪಘಾತದಲ್ಲಿ ಹಲವರು ಸಾವು  ದಾವಣಗೆರೆ ಭೀಕರ ರಸ್ತೆ ಅಪಘಾತದಲ್ಲಿ ಹಲವರು ಸಾವು  ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ  ದಾವಣಗೆರೆಯಲ್ಲಿ ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು  ದಾವಣಗೆರೆ ಅಪಘಾತ ಸುದ್ದಿ
ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ

ಮೃತದೇಹಗಳನ್ನು ಜಗಳೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಕೆಎ 51 ಡಿ 5066 ನೊಂದಣಿಯ ಇಂಡಿಕಾ ಕಾರು ಬೆಂಗಳೂರಿನಿಂದ ಹೊಸಪೇಟೆ ಕಡೆ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಮಾಹಿತಿ ತಿಳಿದು ಘಟನಾಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ಕೈಗೊಂಡ ಬಳಿಕ ಅಪಘಾತದ ನಿಖರ ಮಾಹಿತಿ ನೀಡಿದ್ದಾರೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

Last Updated : Jan 14, 2022, 9:40 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.