ETV Bharat / city

ಪಿತೃ ವಿಯೋಗ ದುಃಖದ ನಡುವೆ ಧ್ವಜಾರೋಹಣ ನೆರವೇರಿಸಿದ ಸಚಿವ ಬೈರತಿ ಬಸವರಾಜ್

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವ ಬೈರತಿ ಬಸವರಾಜ್, ಧ್ವಜಾರೋಹಣ ನೆರವೇರಿಸಿದರು.

byrathi basavaraj
ದಾವಣಗೆರೆಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮ
author img

By

Published : Aug 15, 2022, 10:44 AM IST

ದಾವಣಗೆರೆ: ನಗರಾಭಿವೃದ್ಧಿ ಸಚಿವ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಬಸವರಾಜ್ ಪಿತೃ ವಿಯೋಗ ದುಃಖದ ನಡುವೆಯೂ ದಾವಣಗೆರೆಗೆ ಆಗಮಿಸಿ ಧ್ವಜಾರೋಹಣ ನೆರವೇರಿಸಿದರು.

ಕಳೆದ ದಿನ ತಂದೆಯನ್ನು ಕಳೆದುಕೊಂಡಿದ್ದ ಸಚಿವರು, ಸಕಲ ಕಾರ್ಯಗಳನ್ನು ನೆರವೇರಿಸಿ ಅ ದುಃಖವನ್ನು ಮರೆತು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದರು. ಜಿಲ್ಲಾಧಿಕಾರಿ ಶಿವಾನಂದ್ ಕಪಾಶಿಯವರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಿದ ಬೈರತಿ ಬಸವರಾಜ್, ಬಳಿಕ ತೆರೆದ ವಾಹನದಲ್ಲಿ ಕವಾಯತು ತಂಡಗಳನ್ನು ವೀಕ್ಷಣೆ ಮಾಡಿದರು. ನಂತರ ಪೊಲೀಸ್ , ಅಗ್ನಿಶಾಮಕ, ಗೃಹ ರಕ್ಷಕ ದಳದಿಂದ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ, ಶಾಸಕ ಎಸ್ ಎ ರವೀಂದ್ರನಾಥ್, ಸಂಸದ ಜಿಎಂ ಸಿದ್ದೇಶ್ವರ್ ಹಾಗೂ ಜಿಲ್ಲಾಧಿಕಾರಿ ಶಿವಾನಂದ್ ಕಪಾಶಿ, ಜಿಪಂ ಸಿಇಒ ಚನ್ನಪ್ಪ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಉಪಸ್ಥಿತರಿದ್ದರು.

ದಾವಣಗೆರೆಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮ

ಇದನ್ನೂ ಓದಿ: ವಿವಿಧತೆಯಲ್ಲಿ ಏಕತೆಯೇ ಭಾರತದ ಶಕ್ತಿ.. 100ನೇ ವರ್ಷದ ಸ್ವಾತಂತ್ರ್ಯ ದಿನಕ್ಕೆ ಪಂಚ ಪ್ರಾಣ ಪ್ರತಿಪಾದಿಸಿದ ಮೋದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.