ಮೈಸೂರು: ಕೋವಿಡ್ನಿಂದ ಮೃತಪಟ್ಟವರ ಕುಟುಂಬಕ್ಕೆ ಬ್ಯಾಂಕ್ನಿಂದ ನೋಟಿಸ್ ನೀಡಿದ್ದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ತಗುಲಿ ಸಾವನ್ನಪ್ಪಿದವರಿಗೆ ಡಿಸಿಸಿ ಬ್ಯಾಂಕ್‌ನವರು ಬಾಕಿ ಉಳಿಸಿಕೊಂಡಿದ್ದರೆ ಪಾವತಿಸಿ ಎಂದು ನೋಟಿಸ್ ಕೊಟ್ಟಿದ್ದಾರೆ ಎಂಬ ಸುದ್ದಿ ಪ್ರಕಟವಾಗಿದ್ದು, ದಾವಣಗೆರೆ ಡಿಸಿಸಿ ಬ್ಯಾಂಕ್ ಎಂಡಿ ಅವರನ್ನು ಕೇಳಿದ್ರೆ ನಾವು ನೋಟಿಸ್ ಕೊಟ್ಟಿಲ್ಲ ಎಂದು ಹೇಳುತ್ತಿದ್ದಾರೆ. ಒಂದು ವೇಳೆ ನೋಟಿಸ್ ನೀಡಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದರು.
ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ.. ಬಿಜೆಪಿ ಜೊತೆ ಮೈತ್ರಿ ಇಲ್ಲ: ಹೆಚ್.ಡಿ. ಕುಮಾರಸ್ವಾಮಿ
ಬ್ಯಾಂಕ್ನ ಎಂಡಿ ನೋಟಿಸ್ ನೀಡಿಲ್ಲ ಎಂದು ನನ್ನ ಗಮನಕ್ಕೆ ತಂದಿದ್ದಾರೆ. ಇಂದು ಬೆಂಗಳೂರಿಗೆ ಹೋಗುತ್ತಿದ್ದೇನೆ. ಅಲ್ಲಿಗೆ ಹೋದ ನಂತರ ನೋಟಿಸ್ ನೀಡಿರುವ ವಿಚಾರದ ಬಗ್ಗೆ ಮಾಹಿತಿ ಪಡೆದು ಆ ರೀತಿ ಏನಾದರೂ ನೋಟಿಸ್ ನೀಡಿದ್ದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು