ETV Bharat / city

ಮುಖ್ಯಮಂತ್ರಿ ಆಗಿದ್ದವರು ಘನತೆಯಿಂದ ಮಾತನಾಡಲಿ: ಸಚಿವ ಎಸ್‌.ಟಿ.ಸೋಮಶೇಖರ್‌

ಆರ್​ಎಸ್​ಎಸ್ ಒಂದು ದೇಶಭಕ್ತ ಸಂಘಟನೆ. ಕುಮಾರಸ್ವಾಮಿ ಅವರಿಗೆ ಏನು ಮಾಡಬೇಕು ಎಂಬುದೇ ಗೊತ್ತಾಗುತ್ತಿಲ್ಲ. ಇದೇ ಕಾರಣಕ್ಕೆ ಆರೋಪಗಳನ್ನು ಮಾಡುತ್ತಿದ್ದಾರೆ- ಸಚಿವ ಎಸ್.ಟಿ.ಸೋಮಶೇಖರ್.

Minister ST Somashekar
ಸಚಿವ ಎಸ್.ಟಿ.ಸೋಮಶೇಖರ್
author img

By

Published : Jun 28, 2022, 2:49 PM IST

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಹತಾಶರಾಗಿದ್ದಾರೆ. ಆದರೆ ಮುಖ್ಯಮಂತ್ರಿ ಆಗಿದ್ದವರು ಮಾತನಾಡುವಾಗ ಘನತೆಯಿಂದ ಮಾತನಾಡಲಿ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು​. ಆರ್​ಎಸ್​ಎಸ್​​ ಬಗ್ಗೆ ಹೆಚ್​.ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಆರ್​ಎಸ್​ಎಸ್ ನವರಿಗೆ ಶೇ. 40ರಷ್ಟು ಕಮಿಷನ್ ಕೊಡುತ್ತಾರೆ ಅಂದ್ರೆ ಏನು ಅರ್ಥ? ಎಂದು ಪ್ರಶ್ನಿಸಿದರು.

ಆರ್​ಎಸ್​ಎಸ್ ಒಂದು ದೇಶಭಕ್ತ ಸಂಘಟನೆ. ಇದರ ಬಗ್ಗೆ ಮಾತನಾಡುವುದು ಸರಿಯಲ್ಲ‌. ಮೇಲಾಗಿ ಕುಮಾರಸ್ವಾಮಿ ಅವರಿಗೆ ಏನು ಮಾಡಬೇಕು ಎಂಬುದೇ ಗೊತ್ತಾಗುತ್ತಿಲ್ಲ. ಇದೇ ಕಾರಣಕ್ಕೆ ಈ ರೀತಿಯಾದ ಆರೋಪಗಳನ್ನು ಮಾಡುತ್ತಿದ್ದಾರೆ. ಇಂತಹ ಹೇಳಿಕೆ ನೀಡುವಾಗ ಸ್ವಲ್ಪ ವಿಚಾರಿಸಿ ಮಾತನಾಡಬೇಕು ಎಂದು ಸಲಹೆ ನೀಡಿದರು.

33 ಲಕ್ಷ ರೈತರಿಗೆ ಸಾಲ: ರಾಜ್ಯದಲ್ಲಿ 24 ಸಾವಿರ ಕೋಟಿ ರೂ.ಸಾಲವನ್ನು ರಾಜ್ಯದ 33 ಲಕ್ಷ ರೈತರಿಗೆ ನೀಡಲು ನಿರ್ಧರಿಸಲಾಗಿದೆ. ಇದರಲ್ಲಿ 3 ಲಕ್ಷ ಹೊಸ ರೈತರಿಗೆ ಸಾಲ ನೀಡಲು ನಿರ್ಧರಿಸಲಾಗಿದೆ. ಸಾಲ ನೀಡುವಲ್ಲಿ ಯಾವುದೇ ರೀತಿ ಗೊಂದಲಕ್ಕೆ ಆಸ್ಪದ ಇಲ್ಲ ಎಂದರು.

ಯಶಸ್ವಿನಿ ಯೋಜ‌ನೆ ಮತ್ತೆ ಆರಂಭ: ಯಶಸ್ವಿನಿ ಯೋಜನೆ ಅಕ್ಟೋಬರ್ 2 ರಿಂದ ಜಾರಿಗೆ ಸಾಧ್ಯತೆೆಯಿದೆ. ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆ ಯಶಸ್ವಿನಿ ಯೋಜ‌ನೆ ಮತ್ತೆ ಆರಂಭವಾಗಲಿದೆ. ಈಗಾಗಲೇ ಇಲಾಖೆ ಕಡೆಯಿಂದ ಎಲ್ಲ ತಯಾರಿ ಆಗಿದೆ. ಈ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗಿದೆ. ಅ.2ರಂದು ಉದ್ಘಾಟನೆ ಆಗುವ ಸಾಧ್ಯತೆ ಇದೆ. ಈಗಾಗಲೇ ಹಾಲು ಉತ್ಪಾಕರಿಗೆ ಅನುಕೂಲ ಆಗುವಂತೆ ಕ್ಷೀರ ಸಹಕಾರ ಬ್ಯಾಂಕ್ ಆರಂಭದ ಯೋಜನೆ ಇದೆ. ಇದರಲ್ಲಿ 9 ಲಕ್ಷ ಮಹಿಳೆಯರಿಗೆ ಸಾಲ ಸೌಲಭ್ಯವ ನೀಡುವ ಉದ್ದೇಶವಿದೆ ಎಂದರು.

ಮೊಸರಿನಲ್ಲಿ ಕಲ್ಲು ಹುಡುಕುವ ಅವಶ್ಯಕತೆ ಇಲ್ಲ: ಕಾಂಗ್ರೆಸ್‌ನವರು ಪಠ್ಯಪುಸ್ತಕ ಪರಿಷ್ಕರಣೆ ವಿಚಾರವಾಗಿ ಮೊಸರಿನಲ್ಲಿ ಕಲ್ಲು ಹುಡುಕುವ ಅವಶ್ಯಕತೆ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು. ಕನಕದಾಸರ ವಿಷಯವನ್ನು ಪಠ್ಯಪುಸ್ತಕದಲ್ಲಿ ಕಡಿಮೆ ಹಾಕಿದ್ದಾರೆ ಎಂಬ ವಿಚಾರವಾಗಿ ದಾವಣಗೆರೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಪರಮಪೂಜ್ಯ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಯವರ ಜೊತೆ ಸಿಎಂ ಬಳಿ ನಾನು ಹೋಗಿದ್ದೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ.

ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೂಡ ಅನೇಕ ತಪ್ಪುಗಳು ಆಗಿವೆ. ಸಿಎಂ ಸಕಾರಾತ್ಮಕವಾಗಿ ಒಪ್ಪಿ ಮಾಡಿಕೊಡುವುದಾಗಿ ಹೇಳಿದ್ದಾರೆ. ಅದಕ್ಕೆ ಪೂಜ್ಯರು ಕೂಡ ಸಂತೋಷದಿಂದ ಒಪ್ಪಿದ್ದಾರೆ. ಆದರೆ ಕಾಂಗ್ರೆಸ್​​ನವರು ಪಠ್ಯ ಪುಸ್ತಕ ವಿಚಾರದಲ್ಲಿ ವೈಭವೀಕರಣ ಮಾಡುತ್ತಿದ್ದಾರೆ. ಅವರ ಬೆನ್ನನ್ನು ಕೂಡ ಅವರು ನೋಡಿಕೊಳ್ಳಬೇಕು. ಏನಾದ್ರು ತಪ್ಪು ಇದ್ದರೆ ಅದನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಇದರ ಬಗ್ಗೆ ಸಿದ್ದರಾಮಯ್ಯ ಅವರನ್ನೇ ಕೇಳಿ. ನಾನು ಮಾತನಾಡಲು ಹೋಗಲ್ಲ. ಮುಂದಿನ ಸಿಎಂ ಕುಮಾರಸ್ವಾಮಿ ಎಂಬ ವಿಚಾರವಾಗಿ ಮಾತನಾಡಿದ ಅವರು ಅವರ ಪಕ್ಷಕ್ಕೆ ಸೇರಿದ ವಿಚಾರ. ಯಾರನ್ನಾದರೂ ಸಿಎಂ ಮಾಡಿಕೊಳ್ಳಲಿ. ಕಾಂಗ್ರೆಸ್​​ನಿಂದ ಬಿಜೆಪಿಗೆ ಬಹಳಷ್ಟು ಜನರ ಬರ್ತಾರೆ. ಮುಂದಿನ ದಿನಗಳಲ್ಲಿ ಬಹಿರಂಗ ಆಗುತ್ತದೆ ಎಂದರು.

ಇದನ್ನೂ ಓದಿ: ಸರ್ಕಾರದಿಂದ ಪಠ್ಯಕ್ರಮ ಬದಲು ಆದೇಶ: ಟೀಕೆಗಳ ಸುರಿಮಳೆ, ಆಕ್ರೋಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.