ದಾವಣಗೆರೆ : ಸ್ವಾರ್ಥಕ್ಕೋಸ್ಕರ ಸಚಿವ ಸ್ಥಾನ ನೀಡಬೇಡಿ. ಪಕ್ಷದ ಸಂಘಟನೆಯ ಹಿತದೃಷ್ಟಿಯಿಂದ ಸಚಿವ ಸ್ಥಾನ ನೀಡಿ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ತಿಳಿಸಿದರು.
'ಈಟಿವಿ ಭಾರತ'ದ ಜೊತೆ ಮಾತನಾಡಿದ ಶಾಸಕರು, ಸಚಿವ ಸ್ಥಾನ ನೀಡುವ ಕುರಿತಂತೆ ನಾನು ಎಲ್ಲಿಯೂ ಹೇಳಿಕೆ ನೀಡಿಲ್ಲ. ಪಕ್ಷದ ವಿರುದ್ಧ, ಸರ್ಕಾರದ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ಪಕ್ಷದ ವೇದಿಕೆಯಲ್ಲೇ ಈ ಬಗ್ಗೆ ಚರ್ಚಿಸಿದ್ದೇನೆ. ಸಚಿವ ಸ್ಥಾನ ನೀಡುವುದು ಬಿಡುವುದು ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ ಎಂದರು.
ನಾನು ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಬೆಳಗಾವಿ ಅಧಿವೇಶನದ ವೇಳೆ ಮಾತುಕತೆ ನಡೆಸಿದ್ದು, ಪಕ್ಷದ ಸಂಘಟನೆ ಬಗ್ಗೆಯೇ ಹೊರತು ಯಾವುದೇ ತಂತ್ರ ರೂಪಿಸಿಲ್ಲ. ಅಲ್ಲದೇ ನಾವಿಬ್ಬರೂ ನಾಲ್ಕು ಗೋಡೆಗಳ ಮಧ್ಯೆ ಈ ಬಗ್ಗೆ ಮಾತನಾಡಿದ್ದೇವೆ ಎಂದರು.
ನಾನು ಅಬಕಾರಿ ಸಚಿವನಾಗಿದ್ದಾಗ ಇಡೀ ಇಲಾಖೆಯನ್ನು ನಿಭಾಯಿಸಿದ್ದೇನೆ. ನಮ್ಮ ಹೈಕಮಾಂಡ್ ಪಂಚರಾಜ್ಯ ಚುನಾವಣೆಯಲ್ಲಿ ಬ್ಯುಸಿಯಾಗಿದೆ. ಆದ್ದರಿಂದ ಸಚಿವ ಸಂಪುಟ ಪುನಾರಚನೆ ಮಾಡಲು ವಿಳಂಬ ಆಗ್ತಿದೆ ಎಂದರು.
ಖಾಲಿ ಇರುವ ನಾಲ್ಕು ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ತಿಳಿಸಿದ್ದೇವೆ. ಅದು ಬಿಜೆಪಿ ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದರು.
ಇದನ್ನೂ ಓದಿ: ನಾಡಿದ್ದು ಗಣರಾಜ್ಯೋತ್ಸವ.. ಇಂದೇ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಪ್ರಕಟ?