ದಾವಣಗೆರೆ: ಆರತಿ ಕಾರ್ಯಕ್ರಮವೊಂದರಲ್ಲಿ ಸಿದ್ಧಪಡಿಸಿದ ಆಹಾರ ಸೇವಿಸಿ 50 ಕ್ಕೂ ಹೆಚ್ಚು ಜನರು ಆಸ್ವಸ್ಥರಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾಚನಾಯಕನಹಳ್ಳಿಯಲ್ಲಿ ನಡೆದಿದೆ.
ಮಾಚನಾಯಕನ ಹಳ್ಳಿ ನಿವಾಸಿ ಅಂಜಿನಪ್ಪ ಎನ್ನುವರ ಮನೆಯಲ್ಲಿ ನಡೆದ ಆರತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜನ್ರು ಅಲ್ಲೇ ಸಿದ್ಧಪಡಿಸಿದ ಆಹಾರವನ್ನು ಸೇವಿಸಿದ್ದರು. ಬಳಿಕ 50 ಕ್ಕೂ ಹೆಚ್ಚು ಜನರಿಗೆ ಮೊದಲು ಹೊಟ್ಟೆ ನೋವು ಕಾರಣಿಸಿಕೊಂಡು ಕೆಲವೇ ನಿಮಿಷಗಳಲ್ಲಿ ವಾಂತಿಯಾಗಿದೆ. ಆಹಾರ ಸೇವಿಸಿ ಅಸ್ವಸ್ಥರಾದವರನ್ನು ಕೂಡಲೇ ಚನ್ನಗಿರಿ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು, ಆಹಾರ ಸೇವಿಸಿ ಅಸ್ವಸ್ಥರಾಗಿದ್ದ ಜನರ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಮಾಹಿತಿ ಆಧಾರಿಸಿ ಚನ್ನಗಿರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಹಾರ ಸಿದ್ಧಪಡಿಸಿದವರ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.