ದಾವಣಗೆರೆ: ಮನೆ ಗೋಡೆ ಕುಸಿದ ಪರಿಣಾಮ ತಾಯಿ-ಮಗು ಸಾವನ್ನಪ್ಪಿರುವ ಘಟನೆ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ನಡೆದಿದೆ.
ಉಮಾ (30) ಹಾಗೂ ಧನುಷ್(1) ಮೃತರು. ಮನೆಯಲ್ಲಿ ಮಲಗಿರುವ ವೇಳೆ ಇದ್ದಕ್ಕಿದ್ದಂತೆ ಗೋಡೆ ಕುಸಿದ ಪರಿಣಾಮ ಈ ದುರಂತ ಸಂಭವಿಸಿದೆ. ಮನೆಯ ಗೋಡೆ ಕುಸಿದಾಗ ತಾಯಿ-ಮಗು ನಿದ್ರೆ ಮಾಡುತ್ತಿದ್ದರು ಎನ್ನಲಾಗ್ತಿದೆ.

ಮಣ್ಣಿನಡಿ ಸಿಲುಕಿದ್ದ ಇಬ್ಬರನ್ನೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.