ETV Bharat / city

ರಸ್ತೆ, ವೃತ್ತ ನಾಮಫಲಕ ಅನಾವರಣಗೊಳಿಸಿದ ಸಂಸದ ಜಿ.ಎಂ.ಸಿದ್ದೇಶ್ವರ್

ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ರಸ್ತೆ ಹಾಗೂ ತರಳಬಾಳು ವೃತ್ತದ ನಾಮಫಲಕವನ್ನು ಸಂಸದ ಜಿ.ಎಂ.ಸಿದ್ದೇಶ್ವರ್​ ಮತ್ತು ಶಾಸಕ ಎಸ್.ಎ.ರವೀಂದ್ರನಾಥ್ ಅನಾವರಗೊಳಿಸಿದರು.

ರಸ್ತೆ, ವೃತ್ತ ನಾಮಫಲಕ ಅನಾವರಣಗೊಳಿಸಿದ ಸಂಸದ ಜಿ.ಎಂ.ಸಿದ್ದೇಶ್ವರ್
ರಸ್ತೆ, ವೃತ್ತ ನಾಮಫಲಕ ಅನಾವರಣಗೊಳಿಸಿದ ಸಂಸದ ಜಿ.ಎಂ.ಸಿದ್ದೇಶ್ವರ್
author img

By

Published : Aug 14, 2020, 9:51 AM IST

ದಾವಣಗೆರೆ: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಹದಡಿ ರಸ್ತೆ ಮೂಲಕ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಸೇರುವ ರಸ್ತೆಗೆ “ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ರಸ್ತೆ” ಎಂದು ಹಾಗೂ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದ ಮುಂಭಾಗದಲ್ಲಿ ನಿರ್ಮಿಸಿರುವ ವೃತ್ತಕ್ಕೆ “ತರಳಬಾಳು ವೃತ್ತ” ಎಂದು ನಾಮಕರಣ ಮಾಡಲಾಯಿತು.

ರಸ್ತೆ, ವೃತ್ತ ನಾಮಫಲಕ ಅನಾವರಣಗೊಳಿಸಿದ ಸಂಸದ ಜಿ.ಎಂ.ಸಿದ್ದೇಶ್ವರ್
ರಸ್ತೆ, ವೃತ್ತ ನಾಮಫಲಕ ಅನಾವರಣಗೊಳಿಸಿದ ಸಂಸದ ಜಿ.ಎಂ.ಸಿದ್ದೇಶ್ವರ್

ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ರಸ್ತೆಯ ಹಾಗೂ ತರಳಬಾಳು ವೃತ್ತದ ನಾಮಫಲಕವನ್ನು ಸಂಸದ ಜಿ.ಎಂ.ಸಿದ್ದೇಶ್ವರ್​ ಮತ್ತು ಶಾಸಕ ಎಸ್.ಎ.ರವೀಂದ್ರನಾಥ್ ಅನಾವರಗೊಳಿಸಿದರು. ಬಳಿಕ ಮಾತನಾಡಿದ ಜಿ.ಎಂ.ಸಿದ್ದೇಶ್ವರ್, ಬಹಳ ವರ್ಷಗಳ ಹಿಂದೆಯೇ ಭಾರತೀಯ ಜನತಾ ಪಕ್ಷವು ಈ ರಸ್ತೆ ಮತ್ತು ವೃತ್ತಕ್ಕೆ ಮಾಗನೂರು ಬಸಪ್ಪ ರಸ್ತೆ ಹಾಗೂ ತರಳುಬಾಳು ವೃತ್ತ ಎಂದು ಹೆಸರಿಡಲು ಸರ್ಕಾರಕ್ಕೆ ಮಹಾನಗರ ಪಾಲಿಕೆ ವತಿಯಿಂದ ಶಿಫಾರಸು ಮಾಡಿ ಕಳುಹಿಸಲಾಗಿತ್ತು ಎಂದು ತಿಳಿಸಿದರು.

ಬಿಜೆಪಿ ಸರ್ಕಾರವಿದ್ದಾಗ ಮಂಜೂರಾಗಿ ಸರ್ಕಾರದಿಂದ ಒಪ್ಪಿಗೆ ಬಂದು ಏಳು ವರ್ಷವಾಗಿತ್ತು. ಆದರೆ ಹೆಸರಿಡಲು ಕಾಲ ಕೂಡಿ ಬಂದಿರಲಿಲ್ಲ. ಆದರೆ ಮತ್ತೆ ಬಿಜೆಪಿ ಸರ್ಕಾರ ಬಂದ ಮೇಲೆ ಈ ಅವಕಾಶ ಕೂಡಿಬಂದಿದೆ ಎಂದರು. ಸಿರಿಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನಾಡಿಗೆ ಹೆಮ್ಮೆಯ ಗುರುಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ ವೃತ್ತಕ್ಕೆ ತರಳಬಾಳು ಅಂತ ಹೆಸರು ಇಟ್ಟಿರುವುದು ಜಿಲ್ಲೆಯ ಜನತೆಗೆ ಸಂತಸದ ವಿಷಯವಾಗಿದೆ.

ಜೊತೆಗೆ ಆರೂಢ ದಾಸೋಹಿಯಾಗಿ ಮಾಗನೂರು ಬಸಪ್ಪನವರು ಜಿಲ್ಲೆ ಮಾತ್ರವಲ್ಲದೇ ಬೇರೆ ಕಡೆಯಲ್ಲಿಯೂ ಸಾಕಷ್ಟು ದಾನ ಧರ್ಮಗಳನ್ನು ಮಾಡಿದ್ದಾರೆ. ಹಾಗಾಗಿ ಅಂತಹ ವ್ಯಕ್ತಿಯ ಹೆಸರನ್ನು ಈ ರಸ್ತೆಗೆ ಇಟ್ಟಿರುವುದು ಸೂಕ್ತವಾಗಿದ್ದು, ಜಿಲ್ಲೆಯ ಜನತೆ ಹರ್ಷಗೊಂಡಿದ್ದಾರೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.