ದಾವಣಗೆರೆ: ಮಗು ಕಳ್ಳತನ ಮಾಡಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಶಂಕರ ವಿಹಾರ ನಗರದಲ್ಲಿ ನಡೆದಿದೆ.
ನಗರದ ಬಿಎಸ್ಎನ್ಎಲ್ ಕಚೇರಿ ಹಿಂಭಾಗದಲ್ಲಿರುವ ಶಂಕರ ವಿಹಾರ ನಗರದಲ್ಲಿ ನಾಲ್ಕು ವರ್ಷದ ಹೆಣ್ಣು ಮಗುವನ್ನು ಎತ್ತಿಕೊಂಡು ಓಡಲು ಪರಸಪ್ಪ ಎಂಬ ವ್ಯಕ್ತಿ ಯತ್ನಿಸಿದ್ದಾನೆ. ಇದನ್ನು ನೋಡಿದ ಸ್ಥಳೀಯರು ಮಗುವನ್ನು ಕಸಿದುಕೊಂಡು ಆರೋಪಿಯನ್ನು ನಗರದ ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
ಕುಡಿದ ಅಮಲಿನಲ್ಲಿದ್ದ ಆರೋಪಿಯ ಕುರಿತು ಪೊಲೀಸರ ತನಿಖೆಯ ಮುಂದುವರೆಸಿದ್ದಾರೆ.