ದಾವಣಗೆರೆ/ಗಂಗಾವತಿ: ಅಯೋಧ್ಯೆ ತೀರ್ಪು ಹಿನ್ನೆಲೆ ದಾವಣಗೆರೆ ಹಾಗೂ ಕೊಪ್ಪಳ ಜಿಲ್ಲೆಯಲ್ಲೂ ಪೊಲೀಸ್ ಇಲಾಖೆ ತೀವ್ರ ಕಟ್ಟೆಚ್ಚರ ವಹಿಸಿದೆ.
ದಾವಣಗೆರೆ ನಗರದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈಗಾಗಲೇ 4 ಕೆಎಸ್ಆರ್ಪಿ, 800 ಪೊಲೀಸ್ ಅಧಿಕಾರಿಗಳು, 460 ಹೊಂಗಾರ್ಡ್ ಸೇರಿದಂತೆ 160ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಜಿಲ್ಲಾದ್ಯಂತ ಪೊಲೀಸ್ ಅಧಿಕಾರಿಗಳ ನಿರಂತರ ಗಸ್ತು ವ್ಯವಸ್ಥೆ ಮಾಡಲಾಗಿದೆ. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣದಲ್ಲಿ ತೀವ್ರ ನಿಗಾ ವಹಿಸಲಾಗಿದೆ.
ಬೆಳೆಗ್ಗೆ 6 ಗಂಟೆಯಿಂದ ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರ್ವಹಿಸುವಂತೆ ಎಸ್ಪಿ ಸೂಚನೆ ನೀಡಿದ್ದು, ದಾವಣಗೆರೆ ಎಸ್ಪಿ ಹನುಮಂತರಾಯ ಅಯೋಧ್ಯೆಯ ತೀರ್ಪಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಇಂದು ನಡೆಯಲಿರುವ ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ನಂತರ ಪರೀಕ್ಷೆ ದಿನಾಂಕ ತಿಳಿಸಲಾಗುವುದು ಎಂದು ದಾವಣಗೆರೆ ವಿವಿಯ ಪರೀಕ್ಷಾಂಗ ಮುಖ್ಯಸ್ಥೆ ಅನಿತ ಮಾಹಿತಿ ನೀಡಿದ್ದಾರೆ.
ಅಯೋಧ್ಯೆ ತೀರ್ಪು ಹಿನ್ನಲೆ ಗಂಗಾವತಿ ನಿಷೇಧಾಜ್ಞೆ ಜಾರಿ
ಈಗಾಗಲೇ ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ಪ್ರಮುಖ ಪ್ರಾರ್ಥನಾ ಮಂದಿರಗಳ ಮುಂದೆ ಸಶಸ್ತ್ರ ಮೀಸಲು ಪಡೆಯ ತುಕಡಿ ನಿಯೋಜಿಸಲಾಗಿದೆ. ನಗರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅನುಮಾನ ಬಂದಲ್ಲಿ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.