ದಾವಣಗೆರೆ : ಅರಣ್ಯ ಭೂಮಿ ಬಗರ್‌ಹುಕುಂ ಸಾಗುವಳಿ ಪತ್ರ ನೀಡಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಅರಣ್ಯ ಭೂಮಿ ಬಗರ್ ಹುಕ್ಕುಂ ಸಾಗುವಳಿ ಹಕ್ಕು ಪತ್ರಕ್ಕಾಗಿ ಹಲವಾರು ವರ್ಷಗಳಿಂದ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಲಾಗಿದೆ. ಆದರೆ, ಬಗರ್‌ಹುಕ್ಕುಂ ಸಮಿತಿ ಸರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿಲ್ಲ ಎಂದು ಆರೋಪಿಸಿದರು.
ದಾವಣಗೆರೆ ತಾಲೂಕಿನಲ್ಲಿ ಈ ಕುರಿತು ಎರಡು ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಬಗರ್ ಹುಕ್ಕುಂ ಸಮಿತಿ ರಚಿಸಲಾಗಿದೆ. ಫಾರಂ ನಂಬರ್ 52, 53 ಹಾಗೂ 57 ರಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕು ಎಂದು ಪ್ರತಿಭಟನಾಕಾರರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.