ದಾವಣಗೆರೆ : ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇಂದು ವಿಧಿವಶರಾಗಿದ್ದಾರೆ. ಇಡೀ ರಾಜ್ಯವೇ ದುಃಖದಲ್ಲಿದೆ. ವಿಧಿವಶರಾದ ಪುನೀತ್ ರಾಜ್ಕುಮಾರ್ ಅಂತಿಮ ದರ್ಶನವನ್ನು ಮಾಧ್ಯಮಗಳಲ್ಲಿ ನೋಡಲು ವಿದ್ಯುತ್ ಇಲ್ಲದ್ದರಿಂದ, ತಕ್ಷಣ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ದಾವಣಗೆರೆ ನಗರದ ಹದಡಿ ರಸ್ತೆಯಲ್ಲಿರುವ ಬೆಸ್ಕಾಂ ಕಚೇರಿಗೆ ಅಪ್ಪು ಅಭಿಮಾನಿಗಳು ಮುತ್ತಿಗೆ ಹಾಕಿದ್ದಾರೆ.
ದಾವಣಗೆರೆಯ ನಗರದಲ್ಲಿ ಬೆಳಗ್ಗೆಯಿಂದ ವಿದ್ಯುತ್ ವ್ಯತ್ಯಯವಾಗಿದೆ. ತಕ್ಷಣ ವಿದ್ಯುತ್ ನೀಡುವಂತೆ ಅಪ್ಪು ಅಭಿಮಾನಿಗಳು ಪಟ್ಟು ಹಿಡಿದಿದ್ದರು. ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಬೆಸ್ಕಾಂ ಅಧಿಕಾರಿಗಳು, ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸುವ ಭರವಸೆ ನೀಡಿದ್ದಾರೆ.
ಮೇಲಧಿಕಾರಿಗಳ ವಿರುದ್ದ ಧಿಕ್ಕಾರ ಕೂಗಿದ ಅಭಿಮಾನಿಗಳು, ತಕ್ಷಣ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿದರು. ಇಲ್ಲವಾದಲ್ಲಿ ಮತ್ತೆ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ.