ದಾವಣಗೆರೆ: ವಿವಿಧ ದೇಶಗಳಿಂದ ಜಿಲ್ಲೆಗೆ ಒಟ್ಟು 66 ಜನ ಬಂದಿದ್ದಾರೆ. 66 ಜನರ ಪೈಕಿ ಕೊರೊನಾ ವೈರಸ್ ಹೆಚ್ಚಾಗಿ ಕಾಣಿಸಿಕೊಂಡ ದೇಶಗಳಿಂದ 21 ಜನ ಬಂದಿದ್ದಾರೆ. ಅವರರೆಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ. ಜನ ಭಯಪಡುವ ಅಗತ್ಯ ಇಲ್ಲವೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಬೆಣ್ಣೆನಗರಿ ಮಂದಿಗೆ ಹೇಳಿದ್ದಾರೆ.
ನಗರದಲ್ಲಿಂದು ಮನೆಮನೆಗೆ ಲಸಿಕೆ ಅಭಿಯಾನ ಆರಂಭಿಸಿ ಮಾತನಾಡಿದ ಅವರು, 66 ಜನರು ಕೂಡ ಕೊರೊನಾ ನೆಗೆಟಿವ್ ವರದಿ ತಂದಿದ್ದಾರೆ. ಅವರೆಲ್ಲರ ಮೇಲೆ ನಿಗಾ ಇರಿಸಿದ್ದೇವೆ. 7 ದಿನಗಳ ಹೋಂಕ್ವಾರಂಟೈನ್ ಮುಗಿದ ಬಳಿಕ ಸರ್ಕಾರದ ನಿಯಮಾನುಸಾರ ಮತ್ತೊಮ್ಮೆ ಅವರನ್ನು ಟೆಸ್ಟ್ ಮಾಡುತ್ತೇವೆ ಎಂದರು.
ಇದನ್ನೂ ಓದಿ: ಪರಿಷತ್ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ : ಮತಗಟ್ಟೆ, ಅಭ್ಯರ್ಥಿ ಹಾಗೂ ಮತದಾರರೆಷ್ಟು?
ಪರಿಸ್ಥಿತಿಯನ್ನು ನಿಯಂತ್ರಿಸಲು ನಾವು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ. ಜನ ಭಯಪಡುವ ಅಗತ್ಯ ಇಲ್ಲ ಎಂದರು.