ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರುವರಿ 8 ಮತ್ತು 9 ರಂದು ನಡೆಯಲಿರುವ ವಾಲ್ಮೀಕಿ ಜಾತ್ರೆ ಹಿನ್ನೆಲೆ ದಾವಣಗೆರೆಯ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದ್ದು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ಜೊತೆಗೆ ವಿಐಪಿ ಹಾಗೂ ಜನಸಾಮಾನ್ಯರಿಗೆ ಪ್ರತ್ಯೇಕ ವಾಹನಗಳ ಪಾರ್ಕಿಂಗ್, ಹೆಲಿಪ್ಯಾಡ್ ವ್ಯವಸ್ಥೆ ಮಾಡಬೇಕು. ಇದೇ ಸಂದರ್ಭದಲ್ಲಿ ವಾಲ್ಮೀಕಿ ಜನಾಂಗದವರಿಗೆ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಹಾಗೂ ಜಾಗೃತಿ ಮೂಡಿಸುವ ಸ್ಟಾಲ್‌ಗಳನ್ನು ನಿರ್ಮಿಸಬೇಕು ಎಂದು ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸರ್ಕಾರ 30 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಆದ್ರೆ ಅದರಲ್ಲಿ ಬಳಕೆಯಾಗಿದ್ದು ಕೇವಲ 11.5 ಕೋಟಿ ರೂ. ಅನುದಾನ. ಉಳಿದ ಅನುದಾನ ಬಳಕೆಯಾಗದೇ ವಾಪಸ್ಸಾಗಿದೆ. ಅನುದಾನದ ಸಂಪೂರ್ಣ ಸದ್ಬಳಕೆಗೆ ಜನರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸುವ ಬಗ್ಗೆ ಸರ್ಕಾರದಿಂದ ಯೋಜನೆಗಳ ಮಾಹಿತಿ ಕೇಂದ್ರಗಳನ್ನು ತೆರೆಯಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಇನ್ನು ಸಭೆಯಲ್ಲಿ ಡಿಸಿ ಮಹಾಂತೇಶ್ ಬೀಳಗಿ ಹಾಗೂ ಎಸ್ಪಿ ಹನುಮಂತರಾಯ ಜಾತ್ರೆ ಸಂಬಂಧಿಸಿದ ವ್ಯವಸ್ಥೆ ಹಾಗೂ ಸೂಕ್ತ ಬಂದೋಬಸ್ತ್ ಬಗ್ಗೆ ಚರ್ಚಿಸಿದರು.