ದಾವಣಗೆರೆ: "ನನಗ್ಯಾಕ್ರಿ ಬೈಯ್ತಾರೆ. ಬೈಯ್ಯುವ ಅಧಿಕಾರ ಯಾರಿಗೂ ಇಲ್ಲ. ದಿನ ಹಳ್ಳಿಗೆ ಹೋಗ್ತೀರಾ. ಆರೋಗ್ಯದ ಬಗ್ಗೆ ಗಮನ ಕೊಡಿ ಅಂತಾ ವಿನಂತಿ ಮಾಡಿದ್ದಾರೆ ಅಷ್ಟೇ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಡಿಸಿ ತರಾಟೆಗೆ ತೆಗೆದುಕೊಂಡರಲ್ವಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಇಲ್ಲೇನು ಹೆಚ್ಚು ಜನ ಸೇರಿರಲಿಲ್ಲ. ಐದಾರು ಜನ ಇದ್ದೇವೆ ಅಷ್ಟೇ. ಕೊರೊನಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ನಿನ್ನೆಯೂ ನನ್ನ ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದೇನೆ. ನಾಳೆಯೂ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ್ ಹಾಗೂ ಅವರ ಕುಟುಂಬದವರ ಆರೋಗ್ಯದ ಬಗ್ಗೆ ವಿಚಾರಿಸಲು ಹೋಗಿದ್ದೆ. ಯಾವುದೇ ನಿಯಮ ಉಲ್ಲಂಘಿಸಿಲ್ಲ. ಹತ್ತು ಮೀಟರ್ ದೂರ ನಿಂತು ಮಾತನಾಡಿಸಿಕೊಂಡು ಬಂದಿದ್ದೇನೆ. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು, ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.