ETV Bharat / city

ವೈಜ್ಞಾನಿಕ ರೀತಿಯಲ್ಲಿ ಹಕ್ಕಿಜ್ವರ ಸೋಂಕು ತಗುಲಿದ ಕೋಳಿಗಳ ನಾಶ: ಸಚಿವ ಪ್ರಭು ಚೌವ್ಹಾಣ್ - ದಾವಣಗೆರೆ ಹಕ್ಕಿ ಜ್ವರ ಪತ್ತೆ

ರಾಜ್ಯದಲ್ಲಿ ಕೊರೊನಾ ಜೊತೆ ಹಕ್ಕಿಜ್ವರ ಭೀತಿ ಕೂಡಾ ಹಲವು ಜಿಲ್ಲೆಗಳಲ್ಲಿ ಕಾಡತೊಡಗಿದೆ. ಸದ್ಯ ದಾವಣಗೆರೆ ಮತ್ತು ಮೈಸೂರು ಜಿಲ್ಲೆಯಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು, ಸೋಂಕು ತಗುಲಿದ 1,167 ಕೋಳಿಗಳನ್ನು ವೈಜ್ಞಾನಿಕವಾಗಿ ನಾಶ ಮಾಡಲಾಗಿದೆ.

scientifically-destroy-infected-chickens-minister-prabhu-chavan
ಸಚಿವ ಪ್ರಭು ಚವ್ಹಾಣ್
author img

By

Published : Mar 17, 2020, 7:48 PM IST

ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡ ಗ್ರಾಮದಲ್ಲಿ 1167 ನಾಟಿ ಕೋಳಿಗಳು, ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಂಬಾರಕೊಪ್ಪಲು ಗ್ರಾಮದ ಅಶ್ವಿನಿ ಕೋಳಿ ಫಾರಂನ ಸುಮಾರು 455 ಕೋಳಿ ಮತ್ತು 4,500 ಹಿತ್ತಲ ಕೋಳಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಇಲಾಖೆಯ ಅಧಿಕಾರಿಗಳು ನಾಶ ಮಾಡಲಿದ್ದಾರೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಹೇಳಿದ್ದಾರೆ.

ಬನ್ನಿಕೋಡ ಗ್ರಾಮ ಹಾಗೂ ಕುಂಬಾರಕೊಪ್ಪಲು ಗ್ರಾಮಗಳಿಂದ ಬೆಂಗಳೂರಿನಲ್ಲಿರುವ ಪ್ರಾಣಿ ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಪರೀಕ್ಷೆಗಾಗಿ ಕಳಿಸಲಾದ ಮಾದರಿಗಳಲ್ಲಿ ಹಕ್ಕಿಜ್ವರ ದೃಢಪಟ್ಟಿದ್ದು, ಹೆಚ್ಚಿನ ತಪಾಸಣೆಗಾಗಿ ನಿಯಮದಂತೆ ಭೋಪಾಲ್​ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅಲ್ಲಿಯೂ ಸಹ ಹಕ್ಕಿಜ್ವರ ಅಥವಾ ಕೋಳಿ ಶೀತಜ್ವರದ ವೈರಾಣು ಹೆಚ್5ಎನ್1 ಸೋಂಕು ಇರುವುದು ದೃಢಪಟ್ಟಿದೆ ಎಂದು ತಿಳಿಸಿದರು.

ಎರಡು ಗ್ರಾಮಗಳ ಒಂದು ಕಿ.ಮೀ. ವ್ಯಾಪ್ತಿಯಲ್ಲಿನ ಪ್ರದೇಶವನ್ನು ರೋಗಪೀಡಿತ ವಲಯ ಎಂದು ಹಾಗೂ 1ರಿಂದ 10 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಜಾಗೃತ ವಲಯ ಎಂದು ಘೋಷಿಸಿ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ವೈಜ್ಞಾನಿಕವಾಗಿ 2 ಮೀಟರ್ ಉದ್ದ, ಅಗಲ ಹಾಗೂ 2 ಮೀ. ಆಳದ ಗುಂಡಿ ತೆಗೆದು ಕೋಳಿಗಳನ್ನು ಹೂಳಲಾಗುತ್ತದೆ. ಈ ಸಂದರ್ಭದಲ್ಲಿ ಸುಣ್ಣ ಮತ್ತು ಮಣ್ಣನ್ನು ಪದರುಗಳಲ್ಲಿ ಹಾಕಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತದೆ ಎಂದು ಹೇಳಿದರು.

ನಷ್ಟ ಪರಿಹಾರ

3 ತಿಂಗಳ ಕಾಲ ಸೋಂಕು ಇರುವ ಪ್ರದೇಶದಲ್ಲಿ ಯಾವುದೇ ಕುಕ್ಕುಟ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಸೋಂಕಿತ ಪ್ರದೇಶದಲ್ಲಿ 3 ತಿಂಗಳವರೆಗೆ ಸರ್ವೇಕ್ಷಣಾ ಕಾರ್ಯ ನಡೆಯಲಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಸೋಂಕು ಹಿನ್ನೆಲೆಯಲ್ಲಿ ಕೋಳಿಗಳನ್ನು ನಾಶಗೊಳಿಸಿ ಪರಿಹಾರ ಸಹ ನೀಡಲಾಗುತ್ತದೆ. 8 ವಾರದ ಒಳಗಿನ ಮೊಟ್ಟೆ ನೀಡುವ ಪ್ರತಿ ಕೋಳಿಗೆ ರೂ. 20 ಹಾಗೂ 8 ವಾರ ಮೇಲ್ಪಟ್ಟ ಕೋಳಿಗೆ ರೂ. 90 ನೀಡಲಾಗುವುದು. ಮಾಂಸದ ಕೋಳಿಗೆ 6 ವಾರದ ಒಳಗಿನವುಗಳಿಗೆ ರೂ. 20 ಹಾಗೂ 6 ವಾರ ಮೇಲ್ಪಟ್ಟ ಮಾಂಸದ ಕೋಳಿಗೆ ರೂ. 70 ನೀಡಲಾಗುತ್ತದೆ.

ಮೊಟ್ಟೆಗಳ ನಾಶಕ್ಕೆ ಕ್ರಮ

ಸೋಂಕು ತಗುಲಿದ ವ್ಯಾಪ್ತಿಯಲ್ಲಿ ಲಭ್ಯವಿರುವ ಮೊಟ್ಟೆಗಳನ್ನು ಸಹ ನಾಶ ಮಾಡಲು ಕ್ರಮ ವಹಿಸಲಾಗುತ್ತಿದೆ. ಪ್ರತಿ ಮೊಟ್ಟೆಗೆ ರೂ. 3ನಂತೆ ಕುಕ್ಕುಟ ಆಹಾರಕ್ಕೆ ಪ್ರತಿ 1 ಕೆಜಿಗೆ ರೂ. 12 ರಂತೆ ಪರಿಹಾರ ನೀಡಲಾಗುವುದು ಎಂದಿದ್ದಾರೆ. ಕೋಳಿ ಸಾಕಾಣಿಕೆ ಮತ್ತು ಮಾರಾಟದ ವೆಚ್ಚದಲ್ಲಿ ಸಾಕಷ್ಟು ವ್ಯತ್ಯಾಸ ಕಂಡುಬಂದಿದ್ದು, ಮುಂದಿನ ನಷ್ಟವನ್ನು ತಪ್ಪಿಸಲು ಅನೇಕ ಕೋಳಿ ಫಾರಂ ಮಾಲೀಕರು ಕೋಳಿಗಳನ್ನು ಸ್ವಇಚ್ಛೆಯಿಂದ ವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿದ್ದಾರೆ. ಇವುಗಳಿಗೆ ಯಾವುದೇ ರೀತಿಯ ಪರಿಹಾರ ಸರ್ಕಾರದಿಂದ ದೊರೆಯುವುದಿಲ್ಲವೆಂದು ಪಶುಸಂಗೋಪನಾ ಇಲಾಖೆ ಸಚಿವ ಪ್ರಭು ಚೌವ್ಹಾಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.