ETV Bharat / city

ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಿ: ದಾವಣಗೆರೆ ಡಿಸಿ - District Collector, Mahantesh

ಈ ಬಾರಿಯ ದೀಪಾವಳಿ ಹಬ್ಬದ ವೇಳೆ ಸಿಎಸ್‍ಐಆರ್ ಮತ್ತು ಎನ್‍ಇಇಆರ್​ಐ ಪ್ರಮಾಣೀಕೃತ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಿ. ಹಸಿರು ಪಟಾಕಿಗಳ ಖರೀದಿಗೆ ಗಮನಿಸಬೇಕಾದ ಚಿಹ್ನೆ, ರಾಷ್ಟ್ರೀಯ ಪ್ರಮಾಣಪತ್ರ ಮತ್ತು ರಾಸಾಯನಿಕ ಬಳಕೆಗಳ ಬಗ್ಗೆಯೂ ತಿಳಿಸಲಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದ ಉಚ್ಛ ನ್ಯಾಯಾಲಯವು ಶುಕ್ರವಾರ ಕೆಲವು ನಿರ್ದೇಶನಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

DC Mahantesh Beilagi
ಡಿಸಿ ಮಹಾಂತೇಶ್ ಬೀಳಗಿ
author img

By

Published : Nov 14, 2020, 3:50 PM IST

ದಾವಣಗೆರೆ: ದೀಪಾವಳಿ ಹಬ್ಬದ ವೇಳೆ ಈ ಬಾರಿ ಸಿಎಸ್‍ಐಆರ್ ಮತ್ತು ಎನ್‍ಇಇಆರ್​ಐ ಪ್ರಮಾಣೀಕೃತ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಿ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

ಕೋವಿಡ್ ಹರಡುವಿಕೆ ತಡೆ ಸಂಬಂಧ ಇನ್ನೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಸಾರ್ವಜನಿಕರು ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ದೀಪಾವಳಿ ಹಬ್ಬವನ್ನು ಸರಳವಾಗಿ, ಅರ್ಥಗರ್ಭಿತವಾಗಿ, ಭಕ್ತಿ ಪೂರ್ವಕವಾಗಿ ಆಚರಿಸಿ ಎಂದು ಕರೆ ನೀಡಿದ್ದಾರೆ.

ಹಬ್ಬದ ಸಂದರ್ಭದಲ್ಲಿ ನ. 16ರವರೆಗೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟಗಾರರಿಂದ ಮಾರಾಟ ಮಾಡಲು ಮತ್ತು ಸಾರ್ವಜನಿಕರು ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಲು ಅನುಮತಿ ನೀಡಲಾಗಿದೆ. ಹಸಿರು ಪಟಾಕಿಗಳ ಖರೀದಿಗೆ ಗಮನಿಸಬೇಕಾದ ಚಿಹ್ನೆ, ರಾಷ್ಟ್ರೀಯ ಪ್ರಮಾಣಪತ್ರ ಮತ್ತು ರಾಸಾಯನಿಕ ಬಳಕೆಗಳ ಬಗ್ಗೆಯೂ ತಿಳಿಸಲಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದ ಉಚ್ಛ ನ್ಯಾಯಾಲಯವು ಶುಕ್ರವಾರ ಕೆಲವು ನಿರ್ದೇಶನಗಳನ್ನು ನೀಡಿದೆ ಎಂದರು.

ಇದರನ್ವಯ ರಾಜ್ಯದ ನಗರ ಪಾಲಿಕೆಗಳು ಮತ್ತು ಪೊಲೀಸ್ ಇಲಾಖೆ, ಸಂಬಂಧಪಟ್ಟ ಪ್ರಾಧಿಕಾರಗಳು ಸರ್ಕಾರದ ಆದೇಶಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಸೂಚನೆ ನೀಡಲಾಗಿದೆ. ಪಟಾಕಿ ಮಾರಾಟಗಾರರ ಅಂಗಡಿಗಳಿಗೆ ಅಧಿಕಾರಿಗಳು ಭೇಟಿ ನೀಡಿ ಸಿಎಸ್‍ಐಆರ್ ಮತ್ತು ಎನ್‍ಇಇಆರ್​ಐ ಪ್ರಮಾಣೀಕೃತ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡುತ್ತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಪೊಲೀಸ್ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯು ಶಬ್ಧ ಮಾಲಿನ್ಯ ತಡೆಗಟ್ಟಲು ಮತ್ತು ಯಾವುದೇ ಕಾರಣಕ್ಕೂ ನಿಯಮದ ವ್ಯಾಪ್ತಿ ಮೀರಿ ಪಟಾಕಿಗಳ ಶಬ್ಧ ಹೆಚ್ಚಾಗಿ ಬರದಂತೆ ಕ್ರಮ ವಹಿಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ವಹಿಸಬೇಕೇ ಹೊರತು ಇಂತಹವರ ಬಗ್ಗೆ ಸಹಾನುಭೂತಿ ತೋರಿಸಬಾರದು. ಪೊಲೀಸ್ ಇಲಾಖೆ, ನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರಾಧಿಕಾರಗಳು ಈ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.