ದಾವಣಗೆರೆ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲೆಂದು ಕುರುಬರ ಯುವ ಘಟಕದಿಂದ ನಗರ ದೇವತೆ ದುಗ್ಗಮ್ಮನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ದಾವಣಗೆರೆ ನಗರ ದೇವತೆ ದುಗ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು, 101 ಕಾಯಿ ಒಡೆದು ಹರಕೆ ಸಮರ್ಪಿಸಿದರು. ಹೃದಯದ ರಕ್ತ ಪರಿಚಲನೆಯಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರಿಗೆ ಆ್ಯಂಜಿಯೋಪ್ಲಾಸ್ಟ್ ಶಸ್ತ್ರಚಿಕಿತ್ಸೆ ಮಾಡಿದ್ದು, ಸದ್ಯ ಸ್ಟೆಂಟ್ ಅಳವಡಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಬಡವರ ಪಾಲಿನ ಆಶಾಕಿರಣ ಎನಿಸಿಕೊಂಡಿರುವ ಸಿದ್ದರಾಮಯ್ಯ ಆದಷ್ಟು ಬೇಗ ಗುಣಮುಖರಾಗಲಿ ಎಂದು ಸಿದ್ದರಾಮಯ್ಯ ಅಭಿಮಾನಿ ಲಿಂಗರಾಜ್ ನೇತೃತ್ವದಲ್ಲಿ ಕುರುಬ ಸಮಾಜ ಮತ್ತು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ ದೇವರಲ್ಲಿ ಪ್ರಾರ್ಥಿಸಿದ್ದಾರೆ.