ETV Bharat / city

ಅರಣ್ಯ ಭೂಮಿ ಒತ್ತುವರಿ ಪ್ರಶ್ನಿಸಿದ್ದಕ್ಕೆ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ? - people attacked on forest department staff

ಭೂಮಿ ಒತ್ತುವರಿ ಬಗ್ಗೆ ಪ್ರಶ್ನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹೊನ್ನೂರವಡ್ಡರ ಹಟ್ಟಿ ಗ್ರಾಮದ ಕೆಲವರು ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹೊನ್ನಾಳಿ ತಾಲೂಕಿನ ಹೊನ್ನೂರವಡ್ಡರ ಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

some people attacked on forest department staff in davanagere
ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ
author img

By

Published : Feb 22, 2022, 10:05 AM IST

ದಾವಣಗೆರೆ: ಅರಣ್ಯ ಇಲಾಖೆಗೆ ಸೇರಿದ ಜಮೀನು ಒತ್ತುವರಿ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ಕೆಲವರು ಮನಬಂದಂತೆ ಹಲ್ಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಹೊನ್ನಾಳಿ ತಾಲೂಕಿನ ಹೊನ್ನೂರವಡ್ಡರ ಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದೇ ಗ್ರಾಮದಲ್ಲಿರುವ ಅರಣ್ಯ ಭೂಮಿ‌ ಒತ್ತುವರಿ ಮಾಡಿರುವ ಬಗ್ಗೆ ವಿಚಾರಿಸಿರುವ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಮಹಾಂತೇಶ (28) ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ: ಸೂಕ್ತ ರಸ್ತೆ ಸೌಲಭ್ಯಕ್ಕಾಗಿ ವಕೀಲರ ಪ್ರತಿಭಟನೆ

ಹೊನ್ನೂರವಡ್ಡರ ಹಟ್ಟಿ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಅರಣ್ಯ ಇಲಾಖೆ ಹಾಗೂ ಸ್ಥಳೀಯರ ನಡುವೆ ಘರ್ಷಣೆ ನಡೆಯುತ್ತಿದೆ. ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.