ETV Bharat / city

ಅಕ್ರಮ ಕಲ್ಲು ಗಣಿಗಾರಿಕೆ: ಎಸ್.ಆರ್.ಹಿರೇಮಠ ಆರೋಪ ತಳ್ಳಿ ಹಾಕಿದ ಸಂಸದ ಸಿದ್ದೇಶ್ವರ್

ಸಂಸದ ಜಿ.ಎಂ.ಸಿದ್ದೇಶ್ವರ್​​ ಕುಟುಂಬದ ಒಡೆತನದಲ್ಲಿ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಟ್ನಳ್ಳಿ‌ ಗ್ರಾಮ ವ್ಯಾಪಿಯಲ್ಲಿ ಜಿ.ಎಂ.ಶುಗರ್ ಅಂಡ್ ಎನರ್ಜಿ ಪೈ.ಲಿ ಎಂಬ ಕಂಪನಿಗೆ 200 ಎಕರೆಗೂ ಹೆಚ್ಚು ಜಮೀನು ಖರೀದಿಸಿದ್ದಾರೆ. ಅಲ್ಲಿ 1.22 ಎಕರೆ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ಅನುಮತಿ ಪಡೆದು, ಹತ್ತಾರು ಎಕರೆ ಪ್ರದೇಶದಲ್ಲಿ ಅನಧಿಕೃತವಾಗಿ ಕಲ್ಲು ಗಣಿಗಾರಿಕೆ (Illegal stone mining) ಹಾಗು ಕ್ರಶರ್‌ ದಂಧೆ ನಡೆಸುತ್ತಿದ್ದಾರೆ ಎಂದು ಎಸ್.ಆರ್.ಹಿರೇಮಠ ಆರೋಪಿಸಿದ್ದಾರೆ.

ಎಸ್. ಆರ್. ಹಿರೇಮಠ ಹಾಗು  ಜಿ.ಎಂ ಸಿದ್ದೇಶ್ವರ್
ಎಸ್. ಆರ್. ಹಿರೇಮಠ ಹಾಗು ಜಿ.ಎಂ ಸಿದ್ದೇಶ್ವರ್
author img

By

Published : Nov 14, 2021, 9:50 AM IST

ದಾವಣಗೆರೆ: ಸಂಸದರೊಬ್ಬರು ಶುಗರ್‌ ಮತ್ತು ಎನರ್ಜಿಗೆ ಸಂಬಂಧಿಸದಂತೆ ಕಾರ್ಖಾನೆ ನಿರ್ಮಾಣಕ್ಕಾಗಿ ಕಲ್ಲು ಗಣಿಗಾರಿಕೆಗೆ ಪರವಾನಗಿ ತೆಗೆದುಕೊಂಡಿದ್ದರು. ನಂತರ, ಅದೇ ಆಧಾರದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ (Illegal stone mining)ಯನ್ನು ಆರಂಭಿಸಿದ್ದರು. ಈ ಕುರಿತು ಸಾಮಾಜಿಕ ಕಾಳಜಿಯ ಸಂಸ್ಥೆಯೊಂದು ಸರ್ಕಾರಕ್ಕೆ ದೂರು ಸಲ್ಲಿಸಿತ್ತು.

ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ನಡೆದ ವೇಳೆ ಅಕ್ರಮ ಕಲ್ಲು ಗಣಿಗಾರಿಕೆ ನಡೆಸಿದ್ದಕ್ಕೆ ವರದಿ ಸಲ್ಲಿಕೆಯಾಗಿದೆ. ಆದರೂ ಅಧಿಕಾರಿಗಳಾಗಲಿ, ಸರ್ಕಾರವಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್(G.M.Siddeshwar) ಅವರು ಮಾಡುತ್ತಿದ್ದಾರೆ ಎನ್ನಲಾದ ಅಕ್ರಮ ಕಲ್ಲು ಗಣಿಗಾರಿಕೆ (Illegal stone mining) ಬಗ್ಗೆ ಪರಿವರ್ತನಾ ಸಮುದಾಯ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ (S.R.Hiremath) ಮಾಹಿತಿ ನೀಡಿದರು.

ದಾವಣಗೆರೆಯ ಸಂಸದ ಸಿದ್ದೇಶ್ವರ್​​ ಕುಟುಂಬದ ಒಡೆತನದಲ್ಲಿ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಟ್ನಳ್ಳಿ‌ ಗ್ರಾಮ ವ್ಯಾಪಿಯಲ್ಲಿ ಜಿ.ಎಂ.ಶುಗರ್ ಅಂಡ್ ಎನರ್ಜಿ ಪೈ.ಲಿ ಎಂಬ ಕಂಪನಿಗೆ 200 ಎಕರೆಗೂ ಹೆಚ್ಚು ಜಮೀನು ಖರೀದಿಸಿದ್ದಾರೆ. ಅಲ್ಲಿ 1.22 ಎಕರೆ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ಅನುಮತಿ ಪಡೆದು, ಹತ್ತಾರು ಎಕರೆ ಪ್ರದೇಶದಲ್ಲಿ ಅನಧಿಕೃತವಾಗಿ ಕಲ್ಲು ಗಣಿಗಾರಿಕೆ ಹಾಗು ಕ್ರಶರ್‌ ದಂಧೆ ನಡೆಸುತ್ತಿದ್ದಾರೆ.

ಇದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ.ಹಾನಿಯಾಗಿದೆ. ಅಧಿಕಾರಿಗಳು ಈ ಅಕ್ರಮದಲ್ಲಿ ಶಾಮೀಲಾಗಿದ್ದಾರೆ. ಸಿಎಂ ತವರು ಜಿಲ್ಲೆಯಲ್ಲಿ ಈ ಪರಿಸ್ಥಿತಿಯಾದರೆ ರಾಜ್ಯದ ಪರಿಸ್ಥಿತಿ ಹೇಗೆ? ಎಂದು ಎಸ್.ಆರ್ ಹಿರೇಮಠ ಪ್ರಶ್ನಿಸಿದ್ದಾರೆ.

ಹಿರೇಮಠ ಅವರ ಆರೋಪದಲ್ಲಿ ಹುರುಳಿಲ್ಲ:

ಈ ಆರೋಪಕ್ಕೆ ಪ್ರತಿಕ್ರಿಯಿಸಿದ ಸಂಸದ ಜಿ.ಎಂ.ಸಿದ್ದೇಶ್ವರ್‌, ನನ್ನ ಕುಟುಂಬದವರೇ ಶುಗರ್‌ ಫ್ಯಾಕ್ಟರಿ ಮಾಡುತಿದ್ದಾರೆ. ಆದ್ರೆ, ನನಗೂ ಅದಕ್ಕೂ ಸಂಬಂಧವಿಲ್ಲ. ಹಿರೇಮಠ ಅವರ ಆರೋಪದಲ್ಲಿ ಹುರುಳಿಲ್ಲ ಎಂದು ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.

ಎಸ್‌.ಆರ್.‌ಹಿರೇಮಠ ಅವರ ಬಗ್ಗೆ ನನಗೂ ಗೌರವವಿದೆ. ಈಗಾಗಲೇ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಗಳನ್ನು ಮಾಡಿದ್ರು. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ನನಗೆ ಕಳಂಕ ಹೊರಿಸಲು ಯತ್ನಿಸುತ್ತಿದ್ದಾರೆ. ಎಲ್ಲವನ್ನೂ ಕಾನೂನು ಬದ್ಧವಾಗಿಯೇ ಮಾಡಿದ್ದೇವೆ. ವೃಥಾ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಆನೆ ಸಾಗುವಾಗ ನಾಯಿ ಬೊಗಳುತ್ತದೆ. ರಾಜಕಾರಣದಲ್ಲಿ ಇದ್ದಾಗ ಆರೋಪಗಳು ಸಹಜ. ಆದ್ರೆ, ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸ್ಪಷ್ಟನೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.