ETV Bharat / city

ಪಠ್ಯ ಪುಸ್ತಕ ವಿವಾದ ಸರಿಪಡಿಸದಿದ್ದಲ್ಲಿ ಹೋರಾಟ: ನಿರಂಜನಾನಂದಪುರಿ ಸ್ವಾಮೀಜಿ ಎಚ್ಚರಿಕೆ

author img

By

Published : Jun 25, 2022, 10:51 PM IST

ಪಠ್ಯ ಪುಸ್ತಕದ ವಿಚಾರದಲ್ಲಿ ಸರ್ಕಾರ ಮಾಡುತ್ತಿರುವುದು ಸರಿಯಲ್ಲ. ವಿದ್ಯಾರ್ಥಿಗಳ ಭವಿಷ್ಯದ ವಿಚಾರದಲ್ಲಿ ಸರ್ಕಾರದ ಈ ರೀತಿಯ ನಡೆ ಒಪ್ಪುವಂತಹದ್ದಲ್ಲ. ಪಠ್ಯ ಪುಸ್ತಕದ ಬಗ್ಗೆ ಸರಿಯಾದ ನಿರ್ಧಾರ ತೆಗೆದುಕೊಳ್ಳದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ನಿರಂಜನಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.

ನಿರಂಜನಾನಂದಪುರಿ ಸ್ವಾಮೀಜಿ
ನಿರಂಜನಾನಂದಪುರಿ ಸ್ವಾಮೀಜಿ

ದಾವಣಗೆರೆ: ಕರ್ನಾಟಕದಲ್ಲಿ ಪಠ್ಯದ ಬಗ್ಗೆ ಗೊಂದಲ ಸೃಷ್ಟಿಯಾಗಿದೆ. ನಿಮ್ಮ ಉದ್ಧಟತನಗಳು, ಕಾರ್ಯವೈಖರಿಗಳು ಹೀಗೆ ಮುಂದುವರೆದರೆ ಬಹಳ ಕಷ್ಟ ಅನುಭವಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಶನಿವಾರ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೋಡಿ ಕನಕ ಗುರು ಪೀಠದಲ್ಲಿ ಮಾತನಾಡಿದ ಅವರು, ಅದಷ್ಟು ಬೇಗ ಪಠ್ಯ ಪುಸ್ತಕ ವಿಚಾರದಲ್ಲಿ ಆಗಿರುವ ಗೊಂದಲ ಸರಿಪಡಿಸಿ ಎಂದು ಶ್ರೀಗಳು ಮಾಧ್ಯಮದ ಮೂಲಕ ಶಿಕ್ಷಣ ಸಚಿವರಿಗೆ ಹಾಗೂ ಮುಖ್ಯಮಂತ್ರಿಗೆ ಮನವಿ ಮಾಡಿದರು. ಕುವೆಂಪು, ಬಸವಣ್ಣ, ಕನಕದಾಸರು ಸೇರಿದಂತೆ ಹಲವು ಮಹನೀಯರ ಸತ್ಯ ಜೀವನ ಚರಿತ್ರೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು. ಸರಿಪಡಿಸದಿದ್ದರೆ ಎಲ್ಲರ ಜೊತೆ ಸೇರಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದರು.

ಪಠ್ಯ ಪುಸ್ತಕ ವಿವಾದ ಸರಿಪಡಿಸಿ, ಇಲ್ಲದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದ ಸ್ವಾಮೀಜಿ

ಕುರುಬ ಸಮಾಜಕ್ಕೆ ಎಸ್ ಟಿ ಮೀಸಲಾತಿ: ನಮ್ಮ ಹೋರಾಟ ಶುರುವಾದಾಗಿನಿಂದ ನಾವು ಒಂದು ದಿನವು ನೆಮ್ಮದಿಯಿಂದ ಇಲ್ಲ. ಕಾರ್ಯ ವೈಖರಿ ಬಗ್ಗೆ ಪ್ರತಿ ದಿನ ಮಾತನಾಡುತ್ತ ಬಂದಿದ್ದೇವೆ. ಬುಡಕಟ್ಟು ಸಂಶೋಧನಾ ಕೇಂದ್ರದಿಂದ ಸಮಗ್ರವಾದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ವರದಿ ಸರ್ಕಾರಕ್ಕೆ ತಲುಪಿದ ನಂತರ ಸೂಕ್ತ ನಿರ್ಧಾರಕ್ಕೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಒಂದು ಭ್ರಷ್ಟಾಚಾರ ಮುಚ್ಚಿಹಾಕಲು ಮತ್ತೊಂದು ಪ್ರಕರಣ ಮುನ್ನೆಲೆಗೆ ತರಲಾಗುತ್ತದೆ: ಕೋಡಿಹಳ್ಳಿ ಚಂದ್ರಶೇಖರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.