ಮಂಗಳೂರು: ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಳ್ತಂಗಡಿ ತಾಲೂಕಿನ ಸರ್ಕಾರಿ ಆಸ್ಪತ್ರೆಯ ಬಗ್ಗೆ ಈ ಹಿಂದೆ ಹಲವು ದೂರುಗಳು ಬಂದಿದ್ದವು. ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದ ಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ ನೀಡಿ ಆಸ್ಪತ್ರೆ ಅಧಿಕಾರಿ, ವೈದ್ಯರ ಜೊತೆಗೆ ಮಾತುಕತೆ ನಡೆಸಿದರು. ಆಸ್ಪತ್ರೆ ವ್ಯವಸ್ಥೆ ಪರಿಶೀಲಸಿದ ಅವರು, ಆಸ್ಪತ್ರೆ ಸುಧಾರಣೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳ ಪ್ರಯೋಜನವಾಗುವುದು ಬಡ ರೋಗಿಗಳಿಗೆ. ಸರ್ಕಾರಿ ಆಸ್ಪತ್ರೆ ಸರ್ಕಾರದ ವ್ಯವಸ್ಥೆಯಂತೆ ನಡೆಯಬೇಕಾಗಿದೆ. ಸರ್ಕಾರಿ ಆಸ್ಪತ್ರೆಯ ನ್ಯೂನ್ಯತೆಗಳನ್ನು ದೊಡ್ಡದು ಮಾಡುವುದಕ್ಕಿಂತ ಅದನ್ನು ಸುಧಾರಣೆ ಮಾಡುವುದು ಅವಶ್ಯಕ. ಅದರ ಬದಲಿಗೆ ನ್ಯೂನ್ಯತೆಯನ್ನೇ ದೊಡ್ಡದು ಮಾಡಿದರೆ ಬಡರೋಗಿಗಳಿಗೆ ತೊಂದರೆ ಹೆಚ್ಚಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.