ETV Bharat / city

ದಾವಣಗೆರೆ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ವೀರೇಶ್ ಹನಗವಾಡಿ ಅಧಿಕಾರ ಸ್ವೀಕಾರ

ದಾವಣಗೆರೆ ನಗರದ ಶಾಮನೂರು ಜಯದೇವಪ್ಪ ಸಭಾಂಗಣದಲ್ಲಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ವೀರೇಶ್ ಹನಗವಾಡಿ ಅವರು ಅಧಿಕಾರ ಸ್ವೀಕಾರ ಮಾಡಿದರು.

Viresh Hanagawadi
ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ವೀರೇಶ್ ಹನಗವಾಡಿ ಅಧಿಕಾರ ಸ್ವೀಕಾರ
author img

By

Published : Feb 15, 2020, 7:45 PM IST

ದಾವಣಗೆರೆ: ನಗರದ ಶಾಮನೂರು ಜಯದೇವಪ್ಪ ಸಭಾಂಗಣದಲ್ಲಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ವೀರೇಶ್ ಹನಗವಾಡಿ ಅವರು ಅಧಿಕಾರ ಸ್ವೀಕರಿಸಿದರು.

ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ವೀರೇಶ್ ಹನಗವಾಡಿ ಅಧಿಕಾರ ಸ್ವೀಕಾರ

ನಿರ್ಗಮಿತ ಅಧ್ಯಕ್ಷ ಯಶವಂತರಾವ್ ಜಾದವ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು‌, ವೀರೇಶ್ ಹನಗವಾಡಿ ಅವರಿಗೆ ಪಕ್ಷದ ಬಾವುಟ ನೀಡುವ ಮೂಲಕ ಪದಗ್ರಹಣ ಸಮಾರಂಭ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ವೀರೇಶ್ ಹನಗವಾಡಿ, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ, ಈ ಸಂದರ್ಭದಲ್ಲಿ ನಾನು ಜಿಲ್ಲಾಧ್ಯಕ್ಷನಾಗಿರುವುದು ಪುಣ್ಯದ ಕೆಲಸ. ಈ ದೊಡ್ಡ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿಕೊಂಡು ಯಶವಂತರಾವ್ ಜಾದವ್ ಅವರ ದಾರಿಯಲ್ಲೇ ನಡೆಯುತ್ತೇನೆ ಎಂದರು.

ನಿರ್ಗಮಿತ ಸದಸ್ಯ ಯಶವಂತರಾವ್ ಜಾದವ್ ಮಾತನಾಡಿ, ನಾನು ಜಿಲ್ಲಾಧ್ಯಕ್ಷನಾಗುವ ಮೊದಲು ಯಾವುದೇ ಹುದ್ದೆ ಸಿಕ್ಕಿರಲಿಲ್ಲ, ಕೆಲಸ ನೋಡಿ ನನ್ನನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡಲಾಯಿತು. ಈ ಅವಕಾಶವನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ ಎಂಬ ನಂಬಿಕೆ ನನಗಿದೆ. ನಾನು ಅಧ್ಯಕ್ಷನಾದ ಬಳಿಕ ಕೆಲವರು ಬೆಂಬಲಕ್ಕೆ ನಿಲ್ಲಲಿಲ್ಲ, ಆದರೂ ಸಹ ಎಲ್ಲವನ್ನು ನಿಭಾಯಿಸಿಕೊಂಡು ಬಂದೆ ಎಂದು ತಿಳಿಸಿದರು.

ಶಾಸಕ ಎಸ್.ಎ. ರವೀಂದ್ರನಾಥ್ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಪ್ರಬಲವಾಗಿ ಬೆಳೆದಿದ್ದು, ಎಲ್ಲವೂ ಸರಾಗವಾಗಿ ನಡೆದುಕೊಂಡು ಹೋಗುತ್ತದೆ. ಇನ್ನೇನು ಚುನಾವಣೆ ಎರಡ್ಮೂರು ತಿಂಗಳಲ್ಲಿ ಬಂತೆಂದರೆ ಕೆಲವರು ಇನ್ನಿಲ್ಲದ ಕೆಲಸಗಳನ್ನು ಶುರು ಮಾಡುತ್ತಾರೆ. ಇದು ಮುಂದಿನ ದಿನಗಳಲ್ಲಿ ಆಗಬಾರದು ಎಂದು ಕಿವಿಮಾತು ಹೇಳಿದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.