ETV Bharat / city

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ: ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸುತ್ತ 200 ಮೀಟರ್ ನಿಷೇಧಾಜ್ಞೆ - ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸುತ್ತ 200 ಮೀಟರ್ ನಿಷೇಧಾಜ್ಞೆ

ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಘೋಷಣೆಯಾಗಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಆಯೋಜನೆ ಹಿನ್ನೆಲೆ ಅಹಿತಕರ ಘಟನೆ ನಿಯಂತ್ರಿಸುವ ದೃಷ್ಟಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

200-meters-prohibition-around-dharwad-district-collector-office
ಧಾರವಾಡ ಜಿಲ್ಲಾಧಿಕಾರಿ
author img

By

Published : Oct 3, 2020, 6:25 PM IST

ಧಾರವಾಡ: ಜಿಲ್ಲೆಯಲ್ಲಿ 2020ರ ಅಕ್ಟೋಬರ್ 28 ರಂದು ನಡೆಯುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ನವೆಂಬರ್ 5 ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಆಯೋಜನೆ ಹಿನ್ನೆಲೆಯಲ್ಲಿ ಶಾಂತಿಗೆ ಭಂಗ ಉಂಟಾಗದಂತೆ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಅಹಿತಕರ ಘಟನೆ ನಿಯಂತ್ರಿಸುವ ದೃಷ್ಟಿಯಿಂದ ಸಿ.ಆರ್.ಪಿ.ಸಿ 1973 ಕಲಂ 144 ಮತ್ತು ಕರ್ನಾಟಕ ರಾಜ್ಯ ಪೊಲೀಸ್ ಕಾಯ್ದೆ 1963 ರ ಕಲಂ 35 ರ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಮತ್ತು ಪೊಲೀಸ್ ಕಮಿಷನರ್ ಆರ್ ದಿಲೀಪ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

200-meters-prohibition-around-dharwad-district-collector-office
ಆದೇಶ ಪ್ರತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.