ಧಾರವಾಡ: ಜಿಲ್ಲೆಯಲ್ಲಿ ಇಂದು 239 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 14,233 ಕ್ಕೇರಿದೆ.
ಇದುವರೆಗೆ 11,564 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2,254 ಪ್ರಕರಣಗಳು ಸಕ್ರಿಯವಾಗಿವೆ. 67 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 415 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಧಾರವಾಡ ಹೊರತುಪಡಿಸಿ ಬೆಳಗಾವಿ, ಹಾವೇರಿ, ದಾವಣಗೆರೆ ಜಿಲ್ಲೆಯ ಪ್ರಕರಣಗಳು ಸಹ ಸೇರಿಕೊಂಡಿವೆ.