ಹುಬ್ಬಳ್ಳಿ: ಮೊರಬ ಗ್ರಾಮದ 65 ವರ್ಷದ ಕೊರೊನಾ ಸೋಂಕಿತ (ಪಿ-7060) ಮೃತಪಟ್ಟಿದ್ದಾನೆ.
ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ ಮೂರಕ್ಕೇರಿದೆ. ನಿನ್ನೆ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸೋಂಕಿತ, ನಿನ್ನೆಯೇ ಅಸನೀಗಿದ್ದ. ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಮೊರಬ ಗ್ರಾಮದ ಹೊರವಲಯದಲ್ಲಿ ಈತನ ಅಂತ್ಯಕ್ರಿಯೆ ನಡೆಸಲಾಗಿದೆ.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 155ಕ್ಕೆ ಏರಿಕೆಯಾಗಿದ್ದು, 50 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರಿಗೆ ಕಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.