ಹುಬ್ಬಳ್ಳಿ: ಕೆರೆಗೆ ಈಜಲು ಹೋಗಿ ವ್ಯಕ್ತಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಪರಸಾಪುರ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ ಫಕ್ಕೀರಪ್ಪ ಕೇಶಪ್ಪನವರ (35) ಮೃತ ರ್ದುದೈವಿ. ಬಿಸಿಲಿನ ಝಳ ಹೆಚ್ಚಾಗಿದ್ದರಿಂದ ಬುಧವಾರ ಊರಿನಲ್ಲಿರುವ ಕೆರೆಗೆ ಈಜಲು ಹೋಗಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ವಿಷಯ ತಿಳಿದ ಗ್ರಾಮಸ್ಥರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ತುರ್ತು ಸೇವೆ ದಳದ ಸಿಬ್ಬಂದಿ ಸಂಜೆಯಿಂದಲೇ ಕಾರ್ಯಾಚರಣೆ ನಡೆಸಿದರೂ ಮೃತದೇಹ ಪತ್ತೆಯಾಗಿರಲಿಲ್ಲ. ಮತ್ತೆ ಇಂದು ಬೆಳಗ್ಗೆ ಕಾರ್ಯಾಚರಣೆ ನಡೆಸಿ ಶವ ಹೊರ ತೆಗೆದಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ: ಆಕ್ಸಿಜನ್ ಇದ್ದರೂ ನಿಲ್ಲದ ಸಾವಿನ ಸರಣಿ: ಡೆತ್ ಸೀಕ್ರೆಟ್ ತಿಳಿಯಲು ಚಾಮರಾಜನಗರಕ್ಕೆ ಪರಿಣಿತರ ತಂಡ