ಧಾರವಾಡ: ಬೆಳ್ಳಂ ಬೆಳಗ್ಗೆ ಧಾರವಾಡದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. ಖಾಸಗಿ ಬಸ್ ಪಲ್ಟಿಯಾಗಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ಖಾಸಗಿ ಬಸ್ವೊಂದು ನಗರದ ಹೊರವಲಯದ ಮುಲ್ಲಾ ಡಾಭಾ ಬಳಿ ಏಕಾಏಕಿ ಪಲ್ಟಿಯಾಗಿದೆ. ಘಟನೆಯಿಂದ ಬಸ್ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಗರಗ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.