ETV Bharat / city

ಚಲಿಸುತ್ತಿದ್ದ ಬೈಕ್​ಗೆ ಅಡ್ಡಬಂದ ನಾಯಿ: ಮನೆಗೆಲಸಕ್ಕೆ ತೆರಳುತ್ತಿದ್ದ ಮಹಿಳೆ ಸಾವು

ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ಚಲಿಸುತ್ತಿದ್ದ ಬೈಕ್​ಗೆ ನಾಯಿ ಅಡ್ಡಬಂದ ಪರಿಣಾಮ‌ ಡಿಕ್ಕಿ ಸಂಭವಿಸಿ ಬೈಕ್​ ಹಿಂಬದಿ ಕುಳಿತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ನಾಯಿ ಕೂಡ ಮೃತಪಟ್ಟಿದೆ.

author img

By

Published : Jan 21, 2021, 11:30 AM IST

a-woman-died-in-bike-accident
ಚಲಿಸುತ್ತಿದ್ದ ಬೈಕ್​ಗೆ ಅಡ್ಡಬಂದ ನಾಯಿ: ಮಹಿಳೆ ಸಾವು

ಧಾರವಾಡ: ಚಲಿಸುತ್ತಿದ್ದ ಬೈಕ್​ಗೆ ಶ್ವಾನವೊಂದು ಅಡ್ಡಬಂದ ಪರಿಣಾಮ‌ ಡಿಕ್ಕಿ ಸಂಭವಿಸಿ ಬೈಕ್​ ಹಿಂಬದಿ ಕುಳಿತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ನಡೆದಿದೆ.

ಧಾರವಾಡದ ಬೆನಕಟ್ಟಿ ಗ್ರಾಮದ ದಿಲ್ ಶಾದ್ ಬಿಸ್ಮಿಲ್ಲಾ ಚಪ್ಪರಬಂಧ್ (43) ಮೃತ ಮಹಿಳೆ. ನಿಗದಿ ಗ್ರಾಮದಿಂದ ಪ್ರಕಾಶ ಎಂಬುವರ ಬೈಕ್​ನಲ್ಲಿ ಧಾರವಾಡಕ್ಕೆ ಮನೆಗೆಲಸಕ್ಕೆಂದು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಬೈಕ್ ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ.

ಓದಿ: ದೇಗುಲದ ಆವರಣದಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ಅರ್ಚಕನ ಮೃತದೇಹ ಪತ್ತೆ

ಆದರೆ, ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ನಾಯಿ ಕೂಡ ಮೃತಪಟ್ಟಿದೆ. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.