ಹುಬ್ಬಳ್ಳಿ: ಹಿಜಾಬ್ ಪ್ರಕರಣ ಸಂಬಂಧ ಹೈಕೋರ್ಟ್ ನೀಡಿರುವ ತೀರ್ಪುನ್ನು ಮುಸ್ಲಿಂ ಬಾಂಧವರು ಸ್ವೀಕರಿಸಬೇಕು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಬ್ದುಲ್ ಖಾದರ್ ನಡಕಟ್ಟಿನ ಹೇಳಿದರು.
ನಗರದಲ್ಲಿ ಇಂದು ಮಾತನಾಡಿದ ಅವರು, ಮಹಮ್ಮದ್ ಪೈಗಂಬರ್ ಅವರು ನಾವು ಯಾವ ದೇಶದಲ್ಲಿ ಇರುತ್ತೇವೆಯೋ ಆ ದೇಶದ ನಿಯಮಗಳನ್ನು ಪಾಲನೆ ಮಾಡಬೇಕೆಂಬ ಸಂದೇಶ ನೀಡಿದ್ದಾರೆ.
ರಾಜ್ಯದ ಉನ್ನತ ನ್ಯಾಯಾಲಯ ನೀಡಿರುವ ಆದೇಶ ಪಾಲನೆ ಮಾಡಬೇಕು. ನಮ್ಮ ನೆಲದ ಕಾನೂನಿಗೆ ಗೌರವ ನೀಡಬೇಕು. ಹಿಜಾಬ್ ವಿಚಾರದಲ್ಲಿ ಹೋರಾಟ ಮಾಡುವುದು ಸರಿಯಲ್ಲ ಎಂದರು.
ಇದನ್ನು ಓದಿ: ಹಿಜಾಬ್ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ: ಹೀಗಿದೆ ಅರ್ಜಿದಾರರ ಮನವಿ