ಹುಬ್ಬಳ್ಳಿ: ಕೆಐಎಡಿಬಿ ಕಚೇರಿ ಹಾಗೂ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಎಸಿಬಿಗೆ ದೂರು ಬಂದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಹುಬ್ಬಳ್ಳಿಯ ರಾಯಾಪುರ ಬಳಿಯ ಕೆಐಎಡಿಬಿ ಕಚೇರಿ ಮೇಲೆ ದಾಳಿ ನಡೆಸಿ, 70 ಸಾವಿರ ನಗದು ಸೇರಿದಂತೆ ಮಹತ್ವದ ದಾಖಲೆಗಳನ್ನ ಜಪ್ತಿ ಮಾಡಿದ್ದಾರೆ.
ಕೆಐಎಡಿಬಿ ಕಚೇರಿಯಲ್ಲಿ ದೊಡ್ಡಮಟ್ಟದ ಅವ್ಯವಹಾರ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಾದಿರಾಜ ಮನ್ನಾರಿ ಹಾಗೂ ಶಿವಾಜಿ ಎನ್ನುವವರು ಪ್ರತ್ಯೇಕ ದೂರು ನೀಡಿದ್ದರು. ಈ ದೂರಿನ ಅನ್ವಯ ಎಸಿಬಿ ಎಸ್ಪಿ ಎಸ್.ನ್ಯಾಮೇಗೌಡ ನೇತೃತ್ವದ ತಂಡ ಕೆಐಎಡಿಬಿ ಕಚೇರಿ ಮೇಲೆ ದಾಳಿ ನಡೆಸಿ ನಗದು ಸೇರಿದಂತೆ ದಾಖಲಾತಿಗಳನ್ನ ವಶಪಡಿಸಿಕೊಂಡಿದ್ದಾರೆ.
ಕಳೆದ ಎರಡು ದಿನಗಳಿಂದ ಸತತವಾಗಿ ಕೆಐಎಡಿಬಿ ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸಿದ ಎಸಿಬಿ ಅಧಿಕಾರಿಗಳು, ನೈಜ ಫಲಾನುಭವಿಗಳಿಗೆ ಪರಿಹಾರ ನೀಡದೇ, ವ್ಯಾಜ್ಯಗಳು ನ್ಯಾಯಾಲಯದಲ್ಲಿರುವ ಪರಿಹಾರ ವಿತರಣೆ ಮಾಡಿರುವ ದಾಖಲೆಗಳನ್ನ ವಶಪಡಿಸಿಕೊಂಡಿದ್ದಾರೆ. ಜೊತೆಗೆ ಕೆಐಎಡಿಬಿ ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿ ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: 72 ನೇ ವಸಂತಕ್ಕೆ ಕಾಲಿಟ್ಟ ಉಪರಾಷ್ಟ್ರಪತಿ: ಶುಭ ಕೋರಿದ ಮಂಡ್ಯ ಸಂಸದೆ ಸುಮಲತಾ!