ಹುಬ್ಬಳ್ಳಿ:- ಜಲ ಮಂಡಳಿ ಕ್ಯಾಂಟರ್ ಮತ್ತು ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಲಾರಿ ಚಾಲಕ, ಕ್ಯಾಂಟರ್ ಚಾಲಕ ಮತ್ತು ಕ್ಲೀನರ್ಗೆ ಗಂಭೀರ ಗಾಯವಾಗಿದೆ.
ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಯಾಂಟರ್ ಚಾಲಕ ಮತ್ತು ಕ್ಲೀನರ್ಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆಯ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.