ಹುಬ್ಬಳ್ಳಿ: ಮಂಗಳೂರು ಗೋಲಿಬಾರ್ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದ್ದು, ವರದಿಯನ್ನಾದರಿಸಿ ಸಂಘಟನೆಗಳ ಪಾತ್ರವಿದ್ದರೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ನೆಲೆಸುವ ಹಿನ್ನೆಲೆ ಮಂಗಳೂರಿನಲ್ಲಿ ನಳೀನಕುಮಾರ್ ಕಟೀಲ್ ನೇತೃತ್ವದಲ್ಲಿ 28 ಸಂಘಟನೆಗಳ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ. ಮುಂಬರುವ ದಿನಗಳಲ್ಲಿ ಈ ರೀತಿಯ ಅಮಾನವೀಯ ಕೃತ್ಯಗಳು ಜರುಗದಂತೆ ಕಾಳಜಿ ವಹಿಸಲಾಗುವುದು ಎಂದರು. ಸಚಿವ ಸಂಪುಟ ವಿಸ್ತರಣೆ ಕುರಿತು, ನಮ್ಮ ಪಕ್ಷದ ವರಿಷ್ಠರು ಹಾಗೂ ಸಿಎಂ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.