ETV Bharat / city

ಅಗ್ನಿಪಥ್‌ ಹಿಂಸಾಚಾರ: ಹುಬ್ಬಳ್ಳಿ- ಧಾರವಾಡದಲ್ಲಿ ಪೊಲೀಸ್ ಹೈ ಅಲರ್ಟ್ - Police High alert in hubli

ಕೇಂದ್ರ ಸರ್ಕಾರದ ಅಗ್ನಿಪಥ್​​ ಯೋಜನೆ ವಿರೋಧಿಸಿ ಹಲವಾರು ಕಡೆ ಯುವಕರು ಪ್ರತಿಭಟನೆ ಮಾಡಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯುಂಟು ಮಾಡಿರುವ ಹಿನ್ನೆಲೆ ಹುಬ್ಬಳ್ಳಿ ಧಾರವಾಡದಲ್ಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

Police High alert in Dharwad
ಧಾರವಾಡ
author img

By

Published : Jun 20, 2022, 7:22 AM IST

ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಅಗ್ನಿಪಥ್​​ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನಾಕಾರರು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್​​​ನಿಂದ ವಾಹನ ತಪಾಸಣೆ ನಡೆಸಲಾಯಿತು.

ಸರ್ಕಾರದ ನಿರ್ದೇಶನದ ಮೇರೆಗೆ ರಾತ್ರೋರಾತ್ರಿ ರಸ್ತೆಗೆ ಇಳಿದ ಪೊಲೀಸರು ಚೆನ್ನಮ್ಮ ವೃತ್ತ, ಕೇಶ್ವಾಪುರ ಸೇರಿದಂತೆ‌ ಆಯಕಟ್ಟಿನ ಪ್ರದೇಶಗಳಲ್ಲಿ ವಾಹನಗಳ ತಪಾಸಣೆ ನಡೆಸಿ ಸೂಚನೆ ನೀಡುತ್ತಿದ್ದಾರೆ. ಧಾರವಾಡದಲ್ಲಿ ಅಗ್ನಿಪಥ್​​ ಯೋಜನೆ ವಿರೋಧಿಸಿ ಹಲವಾರು ಯುವಕರು ಅಲ್ಲಲ್ಲಿ ಗಲಾಟೆ ಮಾಡಲು ಗುಂಪು ಸೇರುತ್ತಿದ್ದು, ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯುಂಟು ಮಾಡುವಂತಹ ಕೃತ್ಯಗಳಲ್ಲಿ ಭಾಗವಹಿಸುತ್ತಿರುವುದು ಕಂಡು ಬರುತ್ತಿದೆ.

ಅಗ್ನಿಪಥ್‌ ಹಿಂಸಾಚಾರ: ಹುಬ್ಬಳ್ಳಿ- ಧಾರವಾಡದಲ್ಲಿ ಪೊಲೀಸ್ ಹೈ ಅಲರ್ಟ್

ಆದ್ದರಿಂದ ಇಂತಹ ಸಂದರ್ಭಗಳಲ್ಲಿ ಪ್ರಕರಣಗಳನ್ನು ದಾಖಲಿಸುವಂತಹ, ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂತಹ ಅವಕಾಶವನ್ನು ಪೊಲೀಸರಿಗೆ ನೀಡಲಾಗಿದೆ. ಯಾವುದೇ ಕಾರಣಕ್ಕೂ, ಯಾರೇ ಆಗಿರಲಿ ಕಾನೂನನ್ನು ಕೈಗೆತ್ತಿಕೊಳ್ಳ ಬಾರದು, ಗಲಾಟೆ ಮಾಡುವುದಾಗಲಿ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯುಂಟು ಮಾಡುವಂತಹ ಕೃತ್ಯಗಳಲ್ಲಿ ಭಾಗವಹಿಸಬಾರದು ಎಂದು ಯುವಕರು ಹಾಗೂ ಸಾರ್ವಜನಿಕರ ಗಮನಕ್ಕೆ ತರಲಾಗಿದೆ.

ಇದನ್ನೂ ಓದಿ: ಅಗ್ನಿಪಥ್‌ ಹಿಂಸಾಚಾರ: ಸಿಕ್ಕಿಬಿದ್ದ ಸಿಕಂದರಾಬಾದ್‌ ಗಲಭೆ ರೂವಾರಿ; ಯುಪಿಯಲ್ಲಿ 41 ಮಂದಿ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.