ಧಾರವಾಡ : ಡಿ.10ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿರುವ ಹಿನ್ನೆಲೆ ಇಂದು ಸಂಜೆ 4 ಗಂಟೆಯಿಂದ ಡಿಸೆಂಬರ್ 10ರ ಸಂಜೆ 4ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
ಎಲ್ಲ ರೀತಿಯ ಮದ್ಯ ತಯಾರಿಕಾ ಘಟಕಗಳು, ಮದ್ಯಸಾಗಣೆ, ಸಂಗ್ರಹಣೆ ನಿಷೇಧಿಸಲಾಗಿದೆ. ಮಾರಾಟ ಮಳಿಗೆಗಳನ್ನು ಮುಚ್ಚಲು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಆದೇಶ ಹೊರಡಿಸಿದ್ದಾರೆ.
ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 135 (ಸಿ) ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಈ ಆದೇಶ ಹೊರಡಿಸಲಾಗಿದೆ. ಅಬಕಾರಿ ಉಪ ಆಯುಕ್ತರು, ಉಪ ಅಧೀಕ್ಷಕರು ಹಾಗೂ ವಿಚಕ್ಷಕದಳದ ಅಧಿಕಾರಿಗಳು ಈ ಆದೇಶ ಜಾರಿಗೊಳಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಇದನ್ನೂ ಓದಿ: ಪರಿಷತ್ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ : ಮತಗಟ್ಟೆ, ಅಭ್ಯರ್ಥಿ ಹಾಗೂ ಮತದಾರರೆಷ್ಟು?