ಹುಬ್ಬಳ್ಳಿ: ತಾಲೂಕಿನ ಗುಡ್ಯನಾಕಟ್ಟಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು.
ಈ ವೇಳೆ ಮೂವತ್ತಕ್ಕೂ ಅಧಿಕ ಮುತ್ತೈದೆಯರು, ಅಂಗನವಾಡಿ ಶಿಕ್ಷಕಿಯರು ಹಾಗೂ ಗ್ರಾಮಸ್ಥರು ಹೂವು ಹಣ್ಣು ಕೊಟ್ಟು ಸೀಮಂತ ಕಾರ್ಯ ನೆರೆವೇರಿಸಿದರು.
ಈ ವೇಳೆ ಮಾತನಾಡಿದ ಆರೋಗ್ಯ ಇಲಾಖೆಯ ಸಹಾಯಕ ಆರ್.ಎಂ.ಕಬನೂರ, ಚೊಚ್ಚಲ ಗರ್ಭಿಣಿಯರಿಗೆ ಸೀಮಂತ ಕಾರ್ಯ ಮಾಡುವುದು ನಮ್ಮ ಸಂಸ್ಕೃತಿಯ ಪ್ರತೀಕ. ಆದ್ದರಿಂದಲೇ ಈ ಕಾರ್ಯಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.
ಗರ್ಭಿಣಿಯರು ಅಪೌಷ್ಠಿಕ ಆಹಾರ ಸೇವನೆ ಮಾಡಿದರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಎಲ್ಲರೂ ಪೌಷ್ಠಿಕ ಆಹಾರ ಸೇವಿಸಬೇಕು. ಮಕ್ಕಳು ಆರೋಗ್ಯದಿಂದ ಹುಟ್ಟಲು ತಾಯಿ ಪೌಷ್ಠಿಕ ಆಹಾರ ಸೇವಿಸಬೇಕು ಎಂದರು.