ಧಾರವಾಡ: ಜಿಲ್ಲೆಯ ಧಾರವಾಡದ ನವಲೂರಿನಲ್ಲಿ ಇಂದು ಮತ್ತೊಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಕೆಮ್ಮು, ನೆಗಡಿ ಹಾಗೂ ಜ್ವರದಿಂದ ಬಳಲುತ್ತಿದ್ದ ನವಲೂರು ಪಠಾಣಗಲ್ಲಿಯ 26 ವರ್ಷದ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದು ಜಿಲ್ಲೆಯ 11ನೇ ಪ್ರಕರಣವಾಗಿದೆ.
ಈಗಾಗಲೇ ಜಿಲ್ಲೆಯಲ್ಲಿ 6 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.