ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಯೋಜನೆಯ ಯಶಸ್ಸಿಗೆ ಮತ್ತೊಂದು ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ರಾಷ್ಟ್ರೀಯ ಮಟ್ಟದಲ್ಲಿ ನಗರ ಸಮೂಹ ಸಾರಿಗೆ ವ್ಯವಸ್ಥೆಯಡಿ ಉತ್ತಮ ಚತುರ ನಗರ ಸಾರಿಗೆ (City with Best Intelligent Transport System (ITS) ವರ್ಗದಡಿ ಕೊಡಮಾಡುವ 2021ನೇ ಸಾಲಿನ ಶ್ರೇಷ್ಠತಾ ಪ್ರಶಸ್ತಿ (Award of Excellence) ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಯೋಜನೆಗೆ ಲಭಿಸಿದೆ.
ಅ.29 ರಂದು ನವದೆಹಲಿಯ ಸುಷ್ಮಾ ಸ್ವರಾಜ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರದೀಪ್ ಸಿಂಗ್ ಪುರಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ನಗರ ಭೂ ಸಾರಿಗೆ ನಿರ್ದೇಶನಾಲಯ ಆಯುಕ್ತೆ ವಿ.ಮಂಜುಲ, ಹೆಚ್ಡಿಬಿಆರ್ಟಿಎಸ್ ಕಂಪನಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಗುರುದತ್ತ ಹೆಗಡೆ ರಾಜ್ಯವನ್ನು ಪ್ರತಿನಿಧಿಸಿ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಇದನ್ನೂ ಓದಿ: ಬಿಆರ್ಟಿಎಸ್ಗೆ ರಾಷ್ಟ್ರೀಯ ಪ್ರಶಸ್ತಿ: ಜಗದೀಶ್ ಶೆಟ್ಟರ್ ಹರ್ಷ