ಹುಬ್ಬಳ್ಳಿ: ಖಾಸಗಿ ಕಾರ್ಯಕ್ರಮಗಳನ್ನು ಎಂದಿನಂತೆ ನಡೆಸಲು ಅನುಮತಿ ನೀಡುವ ಮೂಲಕ ಶಾಮಿಯಾನ ಉದ್ಯಮ ನಡೆಸಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಶಾಮಿಯಾನ ಡೆಕೋರೇಷನ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಕುಮಾರ್ ಹಿರೇಮಠ ಸರ್ಕಾರವನ್ನು ಒತ್ತಾಯಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮದುವೆ ಕಾರ್ಯಕ್ರಮಗಳ ಸೀಜನ್ ಆಗಿರುವ ಕಾರಣ ಅಡುಗೆಯವರು, ಲೈಟಿಂಗ್, ಶಾಮಿಯಾನ, ಫೋಟೋ, ವಿಡಿಯೋಗ್ರಾಫರ್, ಪುರೋಹಿತರು, ಮದುವೆ ಪತ್ರಿಕೆ ಪ್ರಿಂಟರ್ಸ್, ಮಾರಾಟಗಾರರು ಹಾಗೂ ಹೂವು ಮಾರುವವರು ಮದುವೆ ಸಮಾರಂಭಗಳನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಏಕಾಏಕಿ ಸಭೆ-ಸಮಾರಂಭಗಳಿಗೆ ನಿರ್ಬಂಧ ಹಾಕಿದರೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ.
ಸರ್ಕಾರ ಎಲ್ಲ ಉದ್ಯಮಗಳಿಗೆ ಅನುಕೂಲ ಮಾಡಿಕೊಟ್ಟಿದೆ. ಆದರೆ, ಶ್ಯಾಮಿಯಾನ ಉದ್ಯಮಕ್ಕೆ ಯಾವುದೇ ಅನುಕೂಲ ಮಾಡಿಲ್ಲ. ಈ ಬಗ್ಗೆ ಹಲವಾರು ಬಾರಿ ಸರ್ಕಾರಕ್ಕೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಹಾಗಾಗಿ, ಸರ್ಕಾರ ಸಂಕಷ್ಟದಲ್ಲಿರುವ ಶ್ಯಾಮಿಯಾನ ಕೆಲಸಗಾರರಿಗೆ ಕಾರ್ಯಕ್ರಮ ನಡೆಸಲು ಅನುಕೂಲ ಮಾಡಿಕೊಡಬೇಕು. ಇಲ್ಲವಾದರೆ ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಪ್ರಯಾಣಿಕರೇ ಗಮನಿಸಿ, ಪರ್ಯಾಯ ವ್ಯವಸ್ಥೆ ಹೀಗಿದೆ..