ETV Bharat / city

ಹುಬ್ಬಳ್ಳಿಗೆ ಆಗಮಿಸಿದ ಬಿಜೆಪಿ ಉಸ್ತುವಾರಿ: ಶಾಸಕ ಬೆಲ್ಲದ ಶಕ್ತಿ ಪ್ರದರ್ಶನ - ಶಾಸಕ ಅರವಿಂದ ಬೆಲ್ಲದ

ಹೊಸಪೇಟೆಯಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದರು. ಈ ವೇಳೆ ಅದ್ಧೂರಿ ಸ್ವಾಗತ ಕೋರುವ ಮೂಲಕ ಶಾಸಕ ಅರವಿಂದ ಬೆಲ್ಲದ ತಮ್ಮ ಶಕ್ತಿ ಪ್ರದರ್ಶನ ಮಾಡಿದರು.

Arun Singh arrives in Hubli for tomorrow BJP functionary meeting
ಶಾಸಕ ಬೆಲ್ಲದ ಶಕ್ತಿ ಪ್ರದರ್ಶನ
author img

By

Published : Apr 15, 2022, 9:53 PM IST

ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಲೇ ಇದೆ. ಈಗಾಗಲೇ ಸಚಿವ ಸಂಪುಟ ವಿಸ್ತರಣೆ ಕಾರ್ಯ ಮುನ್ನೆಲೆಗೆ ಬರುತ್ತಿದೆ. ಹೊಸಪೇಟೆಯಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸುವ ಮೂಲಕ ಶಾಸಕ ಅರವಿಂದ ಬೆಲ್ಲದ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕಾರಿಣಿ ಸಭೆಯಲ್ಲಿ ಬಹುತೇಕ ಮಹತ್ವದ ನಿರ್ಧಾರಗಳನ್ನು ಕೈಗೆತ್ತಿಕೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಅರವಿಂದ ಬೆಲ್ಲದ ತಮ್ಮ ಬೆಂಬಲಿಗರೊಂದಿಗೆ ಅರುಣ್ ಸಿಂಗ್ ಅವರಿಗೆ ಅದ್ದೂರಿಯಾಗಿ ಸ್ವಾಗತಿಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಹುಬ್ಬಳ್ಳಿಗೆ ಆಗಮಿಸಿದ ಬಿಜೆಪಿ ಉಸ್ತುವಾರಿ: ಶಾಸಕ ಬೆಲ್ಲದ ಶಕ್ತಿ ಪ್ರದರ್ಶನ

ಈ ಹಿಂದೆ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದ ಅರವಿಂದ ಬೆಲ್ಲದ ಅವರಿಗೆ ಈ ಬಾರಿಯಾದರೂ ಸಚಿವ ಸ್ಥಾನ ಲಭಿಸಲಿದೆಯಾ ಎಂಬುವುದು ಸಾರ್ವಜನಿಕರ ಕುತೂಹಲ.

ಇದನ್ನೂ ಓದಿ: ವಿಜಯನಗರ: ನಾಳೆ ಬಿಜೆಪಿ ಕಾರ್ಯಕಾರಣಿ ಸಭೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.