ETV Bharat / city

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯಡಿ ರಿಕ್ಷಾ ನಿಲ್ದಾಣ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ - Auto rickshaw drivers protest in hubli

ಸ್ಮಾರ್ಟ್ ಸಿಟಿ ಯೋಜನೆಯಡಿ ಹುಬ್ಬಳ್ಳಿಯ ರಾಯಣ್ಣ ವೃತ್ತ, ಜಗಜ್ಯೋತಿ ಬಸವೇಶ್ವರ ವೃತ್ತ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪ್ರತಿ 5 ರಿಕ್ಷಾ ನಿಲ್ಲಲು ಆಟೋ ರಿಕ್ಷಾ ನಿಲ್ದಾಣ ನಿರ್ಮಿಸಬೇಕೆಂದು ಆಗ್ರಹಿಸಿ ಆಟೋ ರಿಕ್ಷಾ ಮಾಲೀಕರು ಹಾಗೂ ಚಾಲಕರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Auto rickshaw drivers  protest
ಸ್ಮಾರ್ಟ್ ಸಿಟಿ ಯೋಜನೆಯಡಿ ರಿಕ್ಷಾ ನಿಲ್ದಾಣಕ್ಕೆ ಆಗ್ರಹಿಸಿ ಪ್ರತಿಭಟನೆ..
author img

By

Published : Dec 7, 2020, 4:06 PM IST

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯಡಿ ಹುಬ್ಬಳ್ಳಿ ನಗರದಲ್ಲಿ ರಿಕ್ಷಾ ನಿಲ್ದಾಣ ನಿರ್ಮಿಸಬೇಕೆಂದು ಆಗ್ರಹಿಸಿ ಹುಬ್ಬಳ್ಳಿ ಆಟೋ ರಿಕ್ಷಾ ಮಾಲೀಕರು ಹಾಗೂ ಚಾಲಕರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ರಿಕ್ಷಾ ನಿಲ್ದಾಣಕ್ಕೆ ಆಗ್ರಹಿಸಿ ಪ್ರತಿಭಟನೆ

ಮಹಾನಗರ ಪಾಲಿಕೆ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಹುಬ್ಬಳ್ಳಿ ನಗರದಲ್ಲಿ 17,000 ಸಾವಿರಕ್ಕಿಂತ ಹೆಚ್ಚು ಆಟೋ ರಿಕ್ಷಾಗಳಿದ್ದು, 2014ರಿಂದ ಇಲ್ಲಿಯವರೆಗೆ ಆಟೋ ರಿಕ್ಷಾ ನಿಲ್ದಾಣ ನಿರ್ಮಿಸುವಂತೆ ಮನವಿ ಸಲ್ಲಿಸಿದರೂ ಕೂಡ ಯಾವುದೇ ಸ್ಪಂದನೆ ದೊರೆತಿಲ್ಲ. ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರು ಹಾಗೂ ಮಂಗಳೂರು ಮಾದರಿಯಲ್ಲಿ ಹುಬ್ಬಳ್ಳಿಯ ರಾಯಣ್ಣ ವೃತ್ತ, ಜಗಜ್ಯೋತಿ ಬಸವೇಶ್ವರ ವೃತ್ತ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪ್ರತಿ 5 ರಿಕ್ಷಾ ನಿಲ್ಲಲು ಆಟೋ ರಿಕ್ಷಾ ನಿಲ್ದಾಣ ಮಾಡಿಕೊಡಬೇಕೆಂದು ಆಗ್ರಹಿಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ: ನಾಳೆ ಭಾರತ್​ ಬಂದ್ ಹಿನ್ನೆಲೆ​: ಕನ್ನಡಪರ ಸಂಘಟನೆಗಳಿಂದ ಬೆಂಬಲ

ಪ್ರತಿಭಟನೆಯಲ್ಲಿ ಶೇಖರಯ್ಯ ಮಠಪತಿ, ಹುಸನಪ್ಪಾ ವಗರನಾಳ, ಮಂಜುನಾಥ ಕೋಳಿಕಾಲ್, ದಾವೂದ್ ಅಲಿ, ರಾಜೇಸಾಬ ಸೇರಿದಂತೆ ಇತರರು ಭಾಗಿಯಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.