ಹುಬ್ಬಳ್ಳಿ: ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಪಂಚಮಸಾಲಿ ಸಮುದಾಯದ ಕೊಡುಗೆ ಸಾಕಷ್ಟಿದೆ. ಈ ಸಮುದಾಯವನ್ನು ನಿರ್ಲಕ್ಷ್ಯ ಮಾಡಿದರೆ, ನಿಜಕ್ಕೂ ಬಹುದೊಡ್ಡ ತೊಂದರೆಯನ್ನು ರಾಜ್ಯ ಬಿಜೆಪಿ ಸರ್ಕಾರ ಅನುಭವಿಸುವುದು ಖಂಡಿತ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
ನಗರದಲ್ಲಿಂದು ಪಂಚಮಸಾಲಿ ಸಮಾಜದ ಹೋರಾಟಕ್ಕೂ ಮುನ್ನ ಮಾತನಾಡಿದ ಅವರು, ಈಗಾಗಲೇ ಸಾಕಷ್ಟು ಬಾರಿ ಮನವಿ ಸಲ್ಲಿಸಿ ಗಡುವು ನೀಡಿದ್ದೇವೆ. ಹೀಗಿದ್ದರೂ ಸರ್ಕಾರ ಮಾತ್ರ ಸೂಕ್ತ ನಿರ್ಧಾರ ಕೈಗೊಂಡಿಲ್ಲ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಎಚ್ಚರಿಕೆ ನೀಡುವ ಸದುದ್ದೇಶದಿಂದ ಈ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ. ಇದು ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಲಿದೆ ಎಂದರು.
ಸರ್ಕಾರ ನಿರ್ಣಾಯಕ ಮತಗಳನ್ನು ಹೊಂದಿರುವ ಪಂಚಮಸಾಲಿ ಸಮುದಾಯಕ್ಕೆ ಕೊಟ್ಟಿರುವ ಮಾತನ್ನು ತಪ್ಪಿದೆ. ಆಗಸ್ಟ್ ತಿಂಗಳಲ್ಲಿ 2ಎ ಮೀಸಲಾತಿ ನೀಡದೆ ಇದ್ದರೆ, ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕಪಾಠ ಕಲಿಸುವುದು ಖಂಡಿತ ಎಂದು ಅವರು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಜೂನ್ 27 ರಂದು 1 ಲಕ್ಷ ಜನರಿಂದ ಸಿಎಂ ಮನೆ ಎದುರು ಧರಣಿ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ