ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಂಡಿದ್ದು, ಇಂದು ಆರೋಪಿ ಬಸವರಾಜ ಮುತ್ತಗಿ ವಿಚಾರಣೆಗೆ ಹಾಜರಾಗಿದ್ದಾರೆ.
ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಸಿಬಿಐ ಅಧಿಕಾರಿಗಳು ವಿಚಾರಣೆ ಮುಂದುವರೆಸಿದ್ದು, ಪ್ರಮುಖ ಆರೋಪಿ ಬಸವರಾಜ ಮುತ್ತಗಿಗೆ ಇಂದು ವಿಚಾರಣೆಗೆ ಬರುವಂತೆ ಬುಲಾವ್ ನೀಡಲಾಗಿತ್ತು.
ಜಿಲ್ಲೆಯಲ್ಲಿ ಮತ್ತೆ ಸಿಬಿಐ ಅಧಿಕಾರಿಗಳು ಠಿಕಾಣಿ ಹೂಡಿದ್ದು, ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಜನರನ್ನು ಕರೆಯಿಸಿ ವಿಚಾರಣೆ ಮಾಡುವ ಸಾಧ್ಯತೆಯಿದೆ. ಈಗಾಗಲೇ ಹಲವು ಬಾರಿ ವಿಚಾರಣೆಗೆ ಎದುರಿಸಿದ್ದ ಬಸವರಾಜ ಮುತ್ತಗಿ, ಇಂದೂ ಕೂಡ ವಿಚಾರಣೆಗೆ ಹಾಜರಾಗಿದ್ದಾರೆ.
ಇದನ್ನೂ ಓದಿ: ಯೋಗೇಶ್‌ಗೌಡ ಕೊಲೆ ಪ್ರಕರಣ: ಪ್ರಮುಖ ಆರೋಪಿ ಬಸವರಾಜ ಮುತ್ತಗಿ ವಿಚಾರಣೆಗೆ ಹಾಜರ್