ETV Bharat / city

ಹುಬ್ಬಳ್ಳಿಯಲ್ಲಿ ನಾಳೆ ಭಗವದ್ಗೀತಾ ಜ್ಞಾನ ದಿವ್ಯಕಲಾಲೋಕ ಅನಾವರಣ

ಸುಮಾರು ಐದು ಎಕರೆ ಪ್ರದೇಶದಲ್ಲಿ ಈ ಮ್ಯೂಸಿಯಂ ನಿರ್ಮಾಣ ಮಾಡಲಾಗಿದೆ. ಭಗವದ್ಗೀತೆ ಹಾಗೂ ಜನರಿಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಪರಿಚಯಿಸುವ ಸದುದ್ದೇಶದಿಂದ ಇಂತಹದೊಂದು ಮ್ಯೂಸಿಯಂ ಅನ್ನು ನಿರ್ಮಾಣ ಮಾಡಿದ್ದಾರೆ..

Bhagavad Gita jyana divyakalaloka Museum
ಭಗವದ್ಗೀತಾಜ್ಞಾನ ದಿವ್ಯಕಲಾಲೋಕ
author img

By

Published : May 14, 2022, 12:38 PM IST

ಹುಬ್ಬಳ್ಳಿ(ಧಾರವಾಡ) : ಮುಗಿಲೆತ್ತರಕ್ಕೆ ತಲೆಯೆತ್ತಿರುವ ಕಟ್ಟಡ. ಒಳಗೆ ಹೋದಂತೆ ನಿಸರ್ಗ ಸೌಂದರ್ಯ ಉಣಬಡಿಸುವ ಪರಿಸರ. ಮುಂದೆ ಹೆಜ್ಜೆ ಹಾಕುತ್ತಿದ್ದಂತೆ ಆಧ್ಯಾತ್ಮಿಕ ಜೀವನಕ್ಕೆ ಅಗತ್ಯವಾದ ಚಿತ್ರಣಗಳು. ಇದೆಲ್ಲದಕ್ಕೂ ಸಾಕ್ಷಿಯಾಗಿರುವುದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ನಿರ್ಮಾಣ ಮಾಡಿರುವ ಜ್ಞಾನಲೋಕ ಮ್ಯೂಸಿಯಂ/ಭಗವದ್ಗೀತಾ ಜ್ಞಾನ ದಿವ್ಯಕಲಾಲೋಕ.

ಭಗವದ್ಗೀತಾ ಜ್ಞಾನ ದಿವ್ಯಕಲಾಲೋಕ..

ಇಷ್ಟು ದಿನ ವಾಣಿಜ್ಯನಗರಿಯಾಗಿ ಬಿಂಬಿತವಾಗಿದ್ದ ಹುಬ್ಬಳ್ಳಿ ಇನ್ಮುಂದೆ ಧಾರ್ಮಿಕ ಹಾಗೂ ಆಧ್ಯಾತ್ಮಿಕ ನಗರವಾಗಿ ಹೊರಹೊಮ್ಮಲಿದೆ. ಇಲ್ಲಿನ ಬೈರಿದೇವರಕೊಪ್ಪದ ಗಾಮನಗಟ್ಟಿ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಈ ಮ್ಯೂಸಿಯಂ ಏಷ್ಯಾದಲ್ಲಿಯೇ ಅತಿದೊಡ್ಡ ಮ್ಯೂಸಿಯಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಸುಮಾರು ಐದು ಎಕರೆ ಪ್ರದೇಶದಲ್ಲಿ ಈ ಮ್ಯೂಸಿಯಂ ನಿರ್ಮಾಣ ಮಾಡಲಾಗಿದೆ. ಭಗವದ್ಗೀತೆ ಹಾಗೂ ಜನರಿಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಪರಿಚಯಿಸುವ ಸದುದ್ದೇಶದಿಂದ ಇಂತಹದೊಂದು ಮ್ಯೂಸಿಯಂ ಅನ್ನು ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: ಉದ್ದೇಶಿತ ಟ್ವಿನ್ ಟವರ್ ನಿರ್ಮಾಣ ಇನ್ನಷ್ಟು ವಿಳಂಬ!

ಸುಮಾರು 108 ಸ್ಟಾಲ್ ಮೂಲಕ ಭಗವದ್ಗೀತೆಯ ಸಾರವನ್ನು ಸಾರ್ವಜನಿಕರಿಗೆ ಅರ್ಥೈಸುವ ನಿಟ್ಟಿನಲ್ಲಿ ಮ್ಯೂಸಿಯಂ ನಿರ್ಮಾಣಗೊಂಡಿದೆ. ಇದೇ ಮೇ 15, ಭಾನುವಾರದಂದು (ನಾಳೆ) ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಈ ಮ್ಯೂಸಿಎಂ ಅನ್ನು ಉದ್ಘಾಟನೆ ಮಾಡುವ ಮೂಲಕ ಸಾರ್ವಜನಿಕರ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುತ್ತದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.