ಹುಬ್ಬಳ್ಳಿ: ಭೈರಿದೇವರಕೊಪ್ಪದಲ್ಲಿ ನಿರ್ಮಾಣಗೊಂಡಿರುವ ಏಷ್ಯಾದ ಅತಿದೊಡ್ಡ ಭಗವದ್ಗೀತಾ ಜ್ಞಾನ ಲೋಕ ಮ್ಯೂಸಿಯಂ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ವತಿಯಿಂದ ಭಗವದ್ಗೀತಾ ಜ್ಞಾನಲೋಕ ನಿರ್ಮಾಣವಾಗಿದೆ.
ಈ ಸಂದರ್ಭದಲ್ಲಿ ಸಚಿವರಾದ ಹಾಲಪ್ಪ ಆಚಾರ, ಶಂಕರ ಪಾಟೀಲ್ ಮುನೇನಕೊಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಅರವಿಂದ ಬೆಲ್ಲದ, ಸೋಮಶೇಖರ ರೆಡ್ಡಿ, ಬ್ರಹ್ಮಕುಮಾರಿಸ್ ಮೌಂಟ್ ಅಬು ಎಡಿಷನಲ್ ಜನರಲ್ ಸೆಕ್ರೆಟರಿ ರಾಜಯೋಗಿ ಬೃಜ್ ಕುಮಾರ, ಬ್ರಹ್ಮಕುಮಾರಿ ಸಂತೋಷ ದಿದೀಜಿ ಸೇರಿದಂತೆ ಇತರೆ ಪ್ರಮುಖರು ಉಪಸ್ಥಿತರಿದ್ದರು.
ಇದನ್ನೂ ಓದಿ: ಸುಡುಬಿಸಿಲು.. ದಾಹ ತೀರಿಸಿಕೊಳ್ಳಲು ಬಂದ 5 ಸಿಂಹಗಳು..