ಧಾರವಾಡ: ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕು ಅಳಗವಾಡಿ ಗ್ರಾಮದ ಬಳಿ ಈ ರಸ್ತೆ ಅಪಘಾತ ಸಂಭವಿಸಿದೆ. ಅಳಗವಾಡಿಯ ಬಸವರಾಜ ಪೂಜಾರ (55) ಮೃತ.
ಮತ್ತೊಂದು ಬೈಕ್ ಮೇಲಿದ್ದ ಸವದತ್ತಿ ತಾಲೂಕಿನ ಕಡಪಟ್ಟಿ ಗ್ರಾಮದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.