ಧಾರವಾಡ: ವಿಷ ಸೇವಿಸಿ ಸೋದರ ಸಂಬಂಧಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದಲ್ಲಿ ನಡೆದಿದೆ.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದಲ್ಲಿ ಒಂದೇ ಕೊಠಡಿಯಲ್ಲಿ ಸೋದರರು ಒಟ್ಟಿಗೆ ವಿಷ ಸೇವಿಸಿದ್ದಾರೆ ಎನ್ನಲಾಗಿದೆ.
ಮೈಲಾರಪ್ಪ ತೆಂಬದ ಮತ್ತು ಪ್ರಕಾಶ ತೆಂಬದ ಆತ್ಮಹತ್ಯೆಗೆ ಶರಣಾದ ಸಹೋದರರು. ಇಬ್ಬರೂ ಒಂದೇ ಕುಟುಂಬದ ಸಹೋದರರ ಮಕ್ಕಳಾಗಿದ್ದು, ಸಾಲಬಾಧೆ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ:ಆತ್ಮಹತ್ಯೆಗೆ ಶರಣಾದ ದಂತ ವಿದ್ಯಾರ್ಥಿನಿ.. ಕಾರಣ ಏನಿತ್ತೋ?