ETV Bharat / city

2030ರ ಹೊತ್ತಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಸಂಪೂರ್ಣ ಜಾರಿ : ಡಿಸಿಎಂ ಅಶ್ವತ್ಥ್ ನಾರಾಯಣ

ಶಿಕ್ಷಣ ನೀತಿ ಜಾರಿಗೆ ಅನುಕೂಲವಾಗುವಂತೆ ಎಲ್ಲ ವಿಷಯವಾರು ಸಮಿತಿ ರಚನೆಗಳ ಬಗ್ಗೆ ಕಾರ್ಯ ಚೌಕಟ್ಟು ನಿಗದಿಪಡಿಸಿ ವರದಿ ನೀಡುವಂತೆ ಕೋರಲಾಗಿದೆ. ಆ ವರದಿಗಳೆಲ್ಲ ಕೈಸೇರಿದ ಕೂಡಲೇ ಜಾರಿಯ ಪ್ರಕ್ರಿಯೆಗಳನ್ನು ಶುರು ಮಾಡಲಾಗುವುದು. ಶಿಕ್ಷಣ ನೀತಿ ಜಾರಿ ಮಾಡುವ ಪ್ರಕ್ರಿಯೆಯಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು. ಈಗಾಗಲೇ ರಾಜ್ಯದಲ್ಲಿ ಡಿಜಿಟಲ್‌ ಕಲಿಕೆ ಮತ್ತು ಬೋಧನೆ ಅತ್ಯುತ್ತಮವಾಗಿ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಈ ವ್ಯವಸ್ಥೆ ಮತ್ತಷ್ಟು ವಿಸ್ತರಣೆಯಾಗಲಿದೆ..

dcm ashwathnarayan
ಡಿಸಿಎಂ ಅಶ್ವತ್ಥನಾರಾಯಣ
author img

By

Published : Jul 12, 2021, 3:27 PM IST

ಧಾರವಾಡ : 2030ರ ಹೊತ್ತಿಗೆ ಶಿಕ್ಷಣ ನೀತಿಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ಜಾರಿ ಮಾಡಲಾಗುವುದು. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸರಕಾರಿ ಕಾಲೇಜುಗಳಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ ಎನ್ ಅಶ್ವತ್ಥ್‌ ನಾರಾಯಣ ಹೇಳಿದರು.

dcm ashwathnarayan
ಸೈನ್ಸ್ ಕಿಟ್‌ಗಳನ್ನು ಹೊತ್ತೊಯ್ಯುವ ವಾಹನಗಳಿಗೆ ಹಸಿರು ನಿಶಾನೆ

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆಯಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಈ ಶೈಕ್ಷಣಿಕ ವರ್ಷದಿಂದಲೇ ಶಿಕ್ಷಣ ನೀತಿ ಜಾರಿ ಮಾಡುವ ವಿಶ್ವವಿದ್ಯಾಲಯಗಳು, ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿವೆ. ಸ್ವ-ಇಚ್ಛೆಯಿಂದ ಯಾರೇ ಮುಂದೆ ಬಂದು ಜಾರಿ ಮಾಡಿದರೂ ಅವಕಾಶ ನೀಡಲಿದೆ ಎಂದರು.

dcm ashwathnarayan
ಕವಿವಿ ಶಿಕ್ಷಣ ತಜ್ಞರೊಂದಿಗೆ ಡಿಸಿಎಂ ಚರ್ಚೆ

ಶಿಕ್ಷಣ ನೀತಿಯನ್ನು ಆಮೂಲಾಗ್ರವಾಗಿ ಜಾರಿ ಮಾಡಲು 15 ವರ್ಷ ಕಾಲಾವಕಾಶವನ್ನ ಕೇಂದ್ರ ಸರಕಾರ ನೀಡಿದೆ. ಆದರೆ, 10 ವರ್ಷಗಳ ಅವಧಿಯಲ್ಲಿ ಜಾರಿ ಮಾಡಲು ರಾಜ್ಯ ಸರಕಾರ ನಿರ್ಧರಿಸಿ ಎಲ್ಲ ಕೆಲಸಗಳನ್ನು ಕೈಗೆತ್ತಿಕೊಂಡಿದೆ. 2040ರ ಹೊತ್ತಿಗೆ ರಾಜ್ಯವೂ ಸೇರಿ ಇಡೀ ದೇಶದ ಶೈಕ್ಷಣಿಕ ವ್ಯವಸ್ಥೆ ಸಂಪೂರ್ಣ ಬದಲಾಗಿ ಬಿಟ್ಟಿರುತ್ತದೆ ಎಂದು ಅವರು ತಿಳಿಸಿದರು.

ಶಿಕ್ಷಣ ನೀತಿ ಜಾರಿಗೆ ಅನುಕೂಲವಾಗುವಂತೆ ಎಲ್ಲ ವಿಷಯವಾರು ಸಮಿತಿ ರಚನೆಗಳ ಬಗ್ಗೆ ಕಾರ್ಯ ಚೌಕಟ್ಟು ನಿಗದಿಪಡಿಸಿ ವರದಿ ನೀಡುವಂತೆ ಕೋರಲಾಗಿದೆ. ಆ ವರದಿಗಳೆಲ್ಲ ಕೈ ಸೇರಿದ ಕೂಡಲೇ ಜಾರಿಯ ಪ್ರಕ್ರಿಯೆಗಳನ್ನು ಶುರು ಮಾಡಲಾಗುವುದು.

ಶಿಕ್ಷಣ ನೀತಿ ಜಾರಿ ಮಾಡುವ ಪ್ರಕ್ರಿಯೆಯಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು. ಈಗಾಗಲೇ ರಾಜ್ಯದಲ್ಲಿ ಡಿಜಿಟಲ್‌ ಕಲಿಕೆ ಮತ್ತು ಬೋಧನೆ ಅತ್ಯುತ್ತಮವಾಗಿ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಈ ವ್ಯವಸ್ಥೆ ಮತ್ತಷ್ಟು ವಿಸ್ತರಣೆಯಾಗಲಿದೆ ಎಂದು ಡಿಸಿಎಂ ಹೇಳಿದರು.

dcm ashwathnarayan
ಕವಿವಿ ಶಿಕ್ಷಣ ತಜ್ಞರೊಂದಿಗೆ ಡಿಸಿಎಂ ಚರ್ಚೆ

ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಡಿಸಿಎಂ ಭೇಟಿ : ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಉಪಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರದಲ್ಲಿರುವ ವೈಜ್ಞಾನಿಕ ಉಪಕರಣ ಹಾಗೂ ಗ್ರಾಮೀಣ ಸೊಗಡಿನಲ್ಲಿ ನಿರ್ಮಿಸಲಾಗಿರುವ ಪ್ರತಿಮೆಗಳನ್ನು ವೀಕ್ಷಿಸಿ ಮಾಹಿತಿ ಪಡೆದರು. ಡಿಸಿಎಂ‌ ಜೊತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಶಾಸಕ ಅರವಿಂದ ಬೆಲ್ಲದ, ಎಂಎಲ್‌ಸಿ ಪ್ರದೀಪ್ ಶೆಟ್ಟರ್ ಉಪಸ್ಥಿತರಿದ್ದರು.

ಇನ್ನು, ಇದೇ ಸಂದರ್ಭದಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ ಅವರು, ಬಳ್ಳಾರಿ ಜಿಲ್ಲೆಯ ಶಾಲೆಗಳಿಗೆ ಸೈನ್ಸ್ ಕಿಟ್‌ಗಳನ್ನು ಹೊತ್ತೊಯ್ಯುವ ವಾಹನಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.